ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ನೀಡುವ ಗೃಹ ಲಕ್ಷ್ಮೀ ಯೋಜನೆ ಸಂಬಂಧ ಆದೇಶ ಹೊರಡಿಸಿರುವ ಸಿಎಂ ಸಿದ್ದರಾಮಯ್ಯ ಅವರ ಸರ್ಕಾರ ಕೆಲವು ಎಚ್ಚರಿಕೆಯನ್ನೂ ನೀಡಿದೆ.
ಅರ್ಜಿ ಸಲ್ಲಿಸುವ ವೇಳೆ ಅರ್ಜಿದಾರರು ಸ್ವಯಂಘೋಷಣೆ ಮಾಡಿಕೊಳ್ಳಬೇಕಾಗುತ್ತದೆ.
ಅರ್ಜಿದಾರರು ಸ್ವಯಂ ಘೋಷಣೆ ಮಾಡಿಕೊಂಡು ಅರ್ಜಿಯಲ್ಲಿ ನೀಡಿರುವ ಮಾಹಿತಿಗಳನ್ನು ನಂತರ ಪರಿಶೀಲನೆಗೂ ಒಳಪಡಿಸಲಾಗುತ್ತದೆ.
ಒಂದೇ ವೇಳೆ ಅರ್ಜಿ ಸಲ್ಲಿಸುವ ವೇಳೆ ತಪ್ಪು ಮಾಹಿತಿ ನೀಡಿ ಗೃಹ ಲಕ್ಷ್ಮೀ ಯೋಜನೆಯ ಸೌಲಭ್ಯ ಪಡೆದಿರುವುದು ಕಂಡುಬಂದರೆ ಆಗ ಗೃಹ ಲಕ್ಷ್ಮೀ ಯೋಜನೆಯಡಿ ಪಡೆದಿರುವ ಅಷ್ಟೂ ಮೊತ್ತವನ್ನು ಅರ್ಜಿದಾರರಿಂದ ವಸೂಲಿ ಮಾಡಲಾಗುತ್ತದೆ.
ತಪ್ಪು ಮಾಹಿತಿ ನೀಡಿ ಅರ್ಜಿ ಸಲ್ಲಿಸಿದವರ ವಿರುದ್ಧ ಮೇಲೆ ಕ್ರಮವನ್ನೂ ಕೈಗೊಳ್ಳಲಾಗುತ್ತದೆ ಎಂದು
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ತನ್ನ ಆದೇಶದಲ್ಲಿ ತಿಳಿಸಿದೆ.