ರಾಜ್ಯಸಭಾ ಚುನಾವಣೆಯಲ್ಲಿ ಗುಬ್ಬಿ ಕ್ಷೇತ್ರದ ಶಾಸಕ ಶ್ರೀನಿವಾಸ್ ಜೆಡಿಎಸ್ಗೆ ಶಾಕ್ ನೀಡಿದ್ದಾರೆ.
ಜೆಡಿಎಸ್ ನಾಯಕ ಕುಮಾರಸ್ವಾಮಿ ಅವರ ಪ್ರಕಾರ ಗುಬ್ಬಿ ಶ್ರೀನಿವಾಸ್ ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿಗೆ ಮತ ಹಾಕಿಲ್ಲ. ಈ ಮೂಲಕ ಜೆಡಿಎಸ್ ಬಹುಮತ 30ಕ್ಕೆ ಕುಸಿದಿದೆ.
ಜೆಡಿಎಸ್ ಅಭ್ಯರ್ಥಿಗೆ ಮತ ಹಾಕುವುದಾಗಿ ಜೆಡಿಎಸ್ ಚುನಾವಣಾ ಏಜೆಂಟ್ ಆಗಿರುವ ಹೆಚ್ ಡಿ ರೇವಣ್ಣ ಅವರಿಗೆ ಮತಪತ್ರವನ್ನು ತೋರಿಸಿದ್ದರೂ ಆ ಮತಪತ್ರವನ್ನು ಮತ ಪೆಟ್ಟಿಗೆಗೆ ಹಾಕಿಲ್ಲ. ಬದಲಿಗೆ ಖಾಲಿ ಮತಪತ್ರವನ್ನು ಹಾಕಿದ್ದಾರೆ.
ವಿಧಾನಸೌಧದಲ್ಲಿ ಕುಮಾರಸ್ವಾಮಿ ಅವರು ಈ ಗಂಭೀರ ಆರೋಪ ಮಾಡಿದ್ದಾರೆ.
ಸಂಜೆ ಮತ ಎಣಿಕೆ ವೇಳೆ ಹಣೆಬರಹ ಗೊತ್ತಾಗುತ್ತದೆ ಎಂದು ಕುಮಾರಸ್ವಾಮಿ ಅವರು ಗುಬ್ಬಿ ಶ್ರೀನಿವಾಸ್ ವಿರುದ್ಧ ಕಿಡಿಕಾರಿದ್ದಾರೆ.