ADVERTISEMENT
ಜಮ್ಮು-ಕಾಶ್ಮೀರ ಕಾಂಗ್ರೆಸ್ (Jammu Kashmir Congress) ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ನೇಮಕಗೊಂಡ ಕೆಲವೇ ಗಂಟೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಗುಲಾಂ ನಬಿ ಆಜಾದ್ (Gulam Nabi Azad) ರಾಜೀನಾಮೆ ನೀಡಿದ್ದಾರೆ.
ಜಮ್ಮು-ಕಾಶ್ಮೀರ ಕಾಂಗ್ರೆಸ್ನ ರಾಜಕೀಯ ವ್ಯವಹಾರಗಳ ಸಮಿತಿಗೂ ಗುಲಾಂ ನಬಿ ರಾಜೀನಾಮೆ ನೀಡಿದ್ದಾರೆ.
ವಿಕಾಲ್ ರಸೂಲ್ ವಾನಿ ಅವರನ್ನು ಜಮ್ಮು-ಕಾಶ್ಮೀರ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಜಮ್ಮು -ಕಾಶ್ಮೀರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಗುಲಾಂ ನಬಿ ನೀಡಿದ್ದ ರಾಜೀನಾಮೆಯನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಸ್ವೀಕರಿಸಿದ್ದಾರೆ.
ರಾಮನ್ ಬಲ್ಲಾ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ಹೊಸ ನೇಮಕಾತಿಯನ್ನು ಸ್ವಾಗತಿಸಿ ಟ್ವೀಟಿಸಿದ್ದ ಗುಲಾಂ ನಬಿ ಹೊಸ ತಂಡಕ್ಕೆ ಶುಭ ಹಾರೈಸಿದ್ದರು.
ADVERTISEMENT