ಒಡಿಶಾ ರೈಲು ದುರಂತ ಸಂಬಂಧ ರೈಲ್ವೆ ಸಚಿವರ ರಾಜೀನಾಮೆ ಕೇಳುವುದು ಸರಿಯಲ್ಲ ಎಂದು ಜೆಡಿಎಸ್ ವರಿಷ್ಠ ಮತ್ತು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಪ್ರತಿಕ್ರಿಯಿಸಿದ್ದಾರೆ.
ಹಾನಿ ಸರಿಪಡಿಸಲು ರೈಲ್ವೆ ಸಚಿವರು ಅಗತ್ಯವಿರುವ ಎಲ್ಲ ಕ್ರಮಗಳನ್ನೂ ಕೈಗೊಂಡಿದ್ದಾರೆ. ಅವರು ನಿರಂತರವಾಗಿ ಕೆಲಸ ಮಾಡುತ್ತಿದ್ದಾರೆ. ತನಿಖೆ ಮುಗಿಯಲಿ. ಸಚಿವರು ಅತ್ಯುತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಮತ್ತು ಈ ಹಂತದಲ್ಲಿ ಅವರ ರಾಜೀನಾಮೆ ಕೇಳುವುದು ಸರಿಯಲ್ಲ
ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹೇಳಿದ್ದಾರೆ.
ಒಡಿಶಾದಲ್ಲಿ ಎರಡು ಎಕ್ಸ್ಪ್ರೆಸ್ ರೈಲು ಮತ್ತು ಒಂದು ಗೂಡ್ಸ್ ರೈಲಿನ ನಡುವೆ ಸಂಭವಿಸಿದ ಅಪಘಾತದಲ್ಲಿ 275 ಮಂದಿ ಅಮಾಯಕರು ಜೀವ ಕಳೆದುಕೊಂಡಿದ್ದಾರೆ. 1,175 ಮಂದಿ ಗಾಯಗೊಂಡಿದ್ದಾರೆ.
ADVERTISEMENT
ADVERTISEMENT