ಇಂದು ಮಾಜಿ ಪ್ರಧಾನಿ ದೇವೌಗೌಡರ ಹುಟ್ಟುಹಬ್ಬದಂದು ಬಿಜೆಪಿಯ ಪ್ರಮುಖ ನಾಯಕರು ಶುಭಕೋರಿದರೆ, ಮತ್ತೊಂದು ಕಡೆ ಬಿಜೆಪಿ ಘಟಕ ದೇವೇಗೌಡ ಹಾಗೂ ಜೆಡಿಎಸ್ ವಿರುದ್ಧ ಪಂಚರತ್ನ ಹಾಗೂ ಕುಟುಂಬ ರಾಜಕಾರಣದ ವಿಷಯದಲ್ಲಿ ವ್ಯಂಗ್ಯವಾಗಿ ಟ್ವೀಟ್ ಮಾಡಿತ್ತು.
ಈ ಟ್ವೀಟ್ಗೆ ವ್ಯಾಗ್ರನಾಗಿ ಮರುತ್ತರ ನೀಡಿರುವ ಹೆಚ್ಡಿ ಕುಮಾರಸ್ವಾಮಿಯವರು, ಬಿಜೆಪಿಯಲ್ಲಿ ಸಿಡಿ ರತ್ನಗಳು, 40% ಕಮಿಷನ್ ರತ್ನಗಳು, ಜನರ ಹಣದ ಲೂಟಿ ರತ್ನಗಳು, ಕಾಸಿಗಾಗಿ ಕೆಲಸ ಮಾರಿಕೊಳ್ಳುವ ರತ್ನಗಳು, ಪಿಎಸ್ ಐ ಕಿಂಗ್ ಪಿನ್ ರತ್ನಗಳು, ಮಾಧ್ಯಮಗಳ ವಿರುದ್ಧ ಕೋರ್ಟ್ ಸ್ಟೇ ತಂದ ರತ್ನಗಳು, ಸದನದಲ್ಲೇ ನೀಲಿಚಿತ್ರ ನೋಡಿದ ರತ್ನಗಳು ಇವೆ ಎಂದು ತಿರುಗೇಟು ನೀಡಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ‘ಬಿಜೆಪಿ ಎಂಬ ಬುರುಡೆ ಪಾರ್ಟಿ’ಮಳೆ ಬಗ್ಗೆ, ಜನರ ಕಷ್ಟದ ಬಗ್ಗೆ ಕೇಳುವುದು ಬಿಟ್ಟು, ಜೆಡಿಎಸ್ ಮತ್ತು ದೇವೇಗೌಡರ ಕುಟುಂಬದ ಬಗ್ಗೆ ಮಾತನಾಡುತ್ತಿದೆ ಸ್ಮಾರ್ಟ್ ಸಿಟಿ ಮಾಡುತ್ತೇವೆ ಎಂದು ಹೊರಟವರು ಕೆಂಪೇಗೌಡರು ಕಟ್ಟಿದ ಭವ್ಯ ಬೆಂಗಳೂರು ನಗರವನ್ನು ಸ್ವಿಮ್ಮಿಂಗ್ ಪೂಲ್ ಮಾಡುತ್ತಿದ್ದಾರೆ! ರಸ್ತೆಗಳು ರಾಜ ಕಾಲುವೆಗಳಾಗಿ, ಮನೆಗಳು ಕೆರೆಗಳಾಗಿವೆ.
ಒಂದು ರಾತ್ರಿ ಸುರಿದ ಕುಂಭದ್ರೋಣ ಮಳೆಗೆ ಬೆಂಗಳೂರು ತತ್ತರಿಸಿದೆ. 'ಬಿಜೆಪಿ ಎಂಬ ಬುರುಡೆ ಪಾರ್ಟಿ 'ಮಳೆ ಬಗ್ಗೆ, ಜನರ ಕಷ್ಟದ ಬಗ್ಗೆ ಕೇಳುವುದು ಬಿಟ್ಟು, ಜೆಡಿಎಸ್ ಮತ್ತು ದೇವೇಗೌಡರ ಕುಟುಂಬದ ಬಗ್ಗೆ ಮಾತನಾಡುತ್ತಿದೆ.1/12
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 18, 2022
ಹೌದು. ಜೆಡಿಎಸ್ ನಲ್ಲಿ ಪಂಚರತ್ನಗಳಿವೆ, ನಿಜ. ಬಿಜೆಪಿಯಲ್ಲಿ ಸೀಡಿರತ್ನಗಳು, 40% ಕಮಿಷನ್ ರತ್ನಗಳು, ಜನರ ಹಣದ ಲೂಟಿ ರತ್ನಗಳು, ಕಾಸಿಗಾಗಿ ಕೆಲಸ ಮಾರಿಕೊಳ್ಳುವ ರತ್ನಗಳು, ಪಿಎಸ್ ಐ ಕಿಂಗ್ ಪಿನ್ ರತ್ನಗಳು, ಮಾಧ್ಯಮಗಳ ವಿರುದ್ಧ ಕೋರ್ಟ್ ಸ್ಟೇ ತಂದ ರತ್ನಗಳು, ಸದನದಲ್ಲೇ ನೀಲಿಚಿತ್ರ ನೋಡಿದ ರತ್ನಗಳು ಕೂಡ ಇವೆ. ಅಲ್ಲವೇ?
ಜನತಾ ಪರಿವಾರ ದೇವೇಗೌಡ ಆಂಡ್ ಸನ್ಸ್ ಅನ್ನುವವರ ಕಣ್ಣುಗಳಿಗೆ ಕಾಮಾಲೆಯಾ? ಬಿಜೆಪಿಯಲ್ಲಿರುವ ಸನ್ಸ್, ಬ್ರದರ್ಸ್ ಮತ್ತು ಫ್ಯಾಮಿಲಿ ಪಾಲಿಟಿಕ್ಸ್ ಬಗ್ಗೆ ಕುರುಡಾ?
ಯಡಿಯೂರಪ್ಪ & ಸನ್ಸ್, ಶೆಟ್ಟರ್ -ನಿರಾಣಿ & ಬ್ರದರ್ಸ್, ಜೊಲ್ಲೆ & ಹಸ್ಬೆಂಡ್,ಉದಾಸಿ & ಸನ್ಸ್, ಜಾರಕಿಹೊಳಿ & ಬ್ರದರ್ಸ್, ಲಿಂಬಾವಳಿ ಭಾವ ಬಾಮೈದ, ಅಂಗಡಿ & ಫ್ಯಾಮಿಲಿ, ಬಸವರಾಜು & ಸನ್, ಕತ್ತಿ & ಬ್ರದರ್ಸ್, ಅಪ್ಪಚ್ಚು ರಂಜನ್ & ಬ್ರದರ್. ಕೊನೆಗೆ, ಬಳ್ಳಾರಿಯ ರೆಡ್ಡಿ & ಬ್ರದರ್ಸ್, ಶ್ರೀರಾಮುಲು & ಸಿಸ್ಟರ್. ಪಟ್ಟಿ ಸಾಕಾ? ಇನ್ನೂ ಬೇಕಾ? ದಿಲ್ಲಿಯಿಂದ ಹಳ್ಳಿ ತನಕ ಕುಟುಂಬ ರಾಜಕಾರಣದ ಕೊಳದಲ್ಲಿ ಬಿಜೆಪಿ ಮಿಂದೇಳುತ್ತಿರುವುದು ಸುಳ್ಳಾ?
ಹೌದು. ಜೆಡಿಎಸ್ ನಲ್ಲಿ ಪಂಚರತ್ನಗಳಿವೆ, ನಿಜ. ಬಿಜೆಪಿಯಲ್ಲಿ ಸೀಡಿರತ್ನಗಳು, 40% ಕಮಿಷನ್ ರತ್ನಗಳು, ಜನರ ಹಣದ ಲೂಟಿ ರತ್ನಗಳು, ಕಾಸಿಗಾಗಿ ಕೆಲಸ ಮಾರಿಕೊಳ್ಳುವ ರತ್ನಗಳು, ಪಿಎಸ್ ಐ ಕಿಂಗ್ ಪಿನ್ ರತ್ನಗಳು, ಮಾಧ್ಯಮಗಳ ವಿರುದ್ಧ ಕೋರ್ಟ್ ಸ್ಟೇ ತಂದ ರತ್ನಗಳು, ಸದನದಲ್ಲೇ ನೀಲಿಚಿತ್ರ ನೋಡಿದ ರತ್ನಗಳು ಕೂಡ ಇವೆ. ಅಲ್ಲವೇ? 7/12
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 18, 2022
ನನ್ನನ್ನು ಲಕ್ಕಿ ಡಿಪ್ ಸಿಎಂ ಎನ್ನುವ ಬಿಜೆಪಿಗೆ, ತನ್ನ ಸಿಎಂಗಳೆಲ್ಲರೂ ಆಪರೇಷನ್ ಕಮಲದ ಕೆಸರಿನಲ್ಲಿ ಡಿಪ್ ಆದವರು ಎನ್ನುವುದು ಗೊತ್ತಿಲ್ಲವೆ ಎಂದು ಬಿಜೆಪಿ ವಿರುದ್ಧ ಆಕ್ರೋಶ ಭರಿತವಾಗಿ ಕುಮಾರಸ್ವಾಮಿಯವರು ಟ್ವೀಟ್ ಮಾಡಿದ್ದಾರೆ.