ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಆರೋಪದಲ್ಲಿ ಅಸತ್ಯ ಇಲ್ಲ, ಹಿಂದಿನ ಕಮಿಷನ್ ಈ ಸರ್ಕಾರದಲ್ಲೂ ಮುಂದುವರೆದಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಮೈಸೂರು ದಸರಾದ 20 ಕೋಟಿ ರೂಪಾಯಿ ಅನುದಾನದಲ್ಲೂ ಕಮಿಷನ್ ವ್ಯವಹಾರ ಆರೋಪ ಕೇಳಿ ಬಂದಿದೆ. ದಸರಾ ಕಾಮಗಾರಿ ಅನುದಾನದಲ್ಲೂ 20 ಪರ್ಸೆಂಟ್ ಕಮಿಷನ್ ಕೇಳಲಾಗಿದೆ. ಕಮಿಷನ್ ಕೊಡದ ಕಾರಣ ಬೆಂಗಳೂರು ಮೂಲದವರಿಗೆ ಗುತ್ತಿಗೆ ನೀಡಲಾಗಿದೆ. ಈ ಬಗ್ಗೆ ವಿದ್ಯುತ್ ಗುತ್ತಿಗೆದಾರರು ನನಗೆ ಮನವಿ ಪತ್ರ ನೀಡಿದ್ದಾರೆ. ಸದನದಲ್ಲಿ ಈ ವಿಚಾರವನ್ನು ಚರ್ಚೆ ಮಾಡುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಇಂತಹ ಕಮಿಷನ್ ಹಣದ ವ್ಯವಹಾರಕ್ಕೆ ಸಾಕ್ಷಿ ಕೊಡಲು ಆಗುತ್ತಾ? ಹಿಂದೆ ಬಿಜೆಪಿ ವಿರುದ್ಧದ 40 ಪರ್ಸೆಂಟ್ ಆರೋಪಕ್ಕೆ ಇವರು ಸಾಕ್ಷಿ ನೀಡಿದ್ದರಾ? ಸುಖಾಸುಮ್ಮನೆ ಆರೋಪ ಮಾಡುತ್ತಲೇ ಬಂದರು ಎಂದು ಮೈಸೂರಲ್ಲಿ ಮಾಜಿ ಸಿಎಂ ಹೆಚ್ಡಿಕೆ ಪ್ರತಿಕ್ರಿಯಿಸಿದ್ದಾರೆ.
ADVERTISEMENT
ADVERTISEMENT