ಮೂರು ದಿನಗಳ ಹಿಂದೆಯಷ್ಟೇ ಯುರೋಪ್ ಪ್ರವಾಸ ಮುಗಿಸಿ ವಾಪಸ್ ಆಗಿದ್ದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಮತ್ತೆ ವಿದೇಶ ಪ್ರವಾಸ ಕೈಗೊಂಡಿದ್ದಾರೆ.
ಸೋಮವಾರ ರಾತ್ರಿಯೇ ಕಾಂಬೋಡಿಯಾಕ್ಕೆ ತೆರಳಿದ್ದಾರೆ.
ಕುಮಾರಸ್ವಾಮಿ ಅವರ ಜೊತೆಗೆ ಮಾಜಿ ಶಾಸಕ ಸಾ ರಾ ಮಹೇಶ್ ತೂಪಲ್ಲಿ ಚೌಡರೆಡ್ಡಿ ಸೇರಿದಂತೆ 10 ಮಂದಿ ತೆರಳಲಿದ್ದಾರೆ.
4 ದಿನಗಳ ಪ್ರವಾಸ ಮುಗಿಸಿಕೊಂಡು ಆಗಸ್ಟ್ 11ರಂದು ಕುಮಾರಸ್ವಾಮಿ ರಾಜ್ಯಕ್ಕೆ ಮರಳಲಿದ್ದಾರೆ.
ಜುಲೈ 23ರಿಂದ 10 ದಿನಗಳ ಯುರೋಪ್ ಪ್ರವಾಸ ಮುಗಿಸಿ ಆಗಸ್ಟ್ 3ರಂದು ಬೆಂಗಳೂರಿಗೆ ವಾಪಸ್ ಆಗಿದ್ದರು. ಯುರೋಪ್ ಪ್ರವಾಸದ ವೇಳೆ ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ ದಂಪತಿಯೂ ಇದ್ದರು.
ADVERTISEMENT
ADVERTISEMENT