ಗುಜರಾತ್ ಕಾಂಗ್ರೆಸ್ನಲ್ಲಿನ ಆಂತರಿಕ ಕಚ್ಚಾಟದಿಂದ ಪಾಟೀದಾರ್ ಸಮುದಾಯದ ದೊಡ್ಡ ನಾಯಕನೆಂದೇ ಗುರುತಿಸಿಕೊಂಡಿದ್ದ ಹಾರ್ದಿಕ್ ಪಟೇಲ್ ಇಂದು ಕಾಂಗ್ರೆಸ್ಗೆ ರಾಜೀನಾಮೆ ನೀಡಿದ್ದಾರೆ.
ಗುಜರಾತ್ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳಿರುವಾಗ ಹಾರ್ದಿಕ್ ಪಟೇಲ್ ರಾಜೀನಾಮೆ ನೀಡಿರುವುದು ಕಾಂಗ್ರೆಸ್ ದೊಡ್ಡ ಹೊಡೆತ ಎಂದೇ ಹೇಳಲಾಗುತ್ತಿದೆ.
ಕಾಂಗ್ರೆಸ್ ಪಕ್ಷಕ್ಕೆ ನಾನು ರಾಜೀನಾಮೆ ನೀಡುತ್ತಿದ್ದೇನೆ. ನನ್ನ ನಿರ್ಧಾರವನ್ನು ನನ್ನ ಸಹೋದ್ಯೋಗಿಗಳು ಮತ್ತು ಗುಜರಾತ್ ಜನರು ಸ್ವಾಗತಿಸುತ್ತಾರೆ ಎಂಬ ನಂಬಿಕೆಯಿದೆ. ಈ ನಿರ್ಧಾರದಿಂದ ಭವಿಷ್ಯದಲ್ಲಿ ಗುಜರಾತ್ ಜನರಿಗಾಗಿ ಸಕಾರಾತ್ಮಕವಾಗಿ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದು ನಾನು ನಂಬಿದ್ದೇನೆ ಎಂದು ಬರೆದುಕೊಂಡಿರುವ ಹಾರ್ದಿಕ್ ಪಟೇಲ್, ಟ್ವಿಟರ್ ಪೋಸ್ಟ್ನಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ತಮ್ಮ ರಾಜೀನಾಮೆ ಪತ್ರವನ್ನು ಹಂಚಿಕೊಂಡಿದ್ದಾರೆ.
आज मैं हिम्मत करके कांग्रेस पार्टी के पद और पार्टी की प्राथमिक सदस्यता से इस्तीफा देता हूँ। मुझे विश्वास है कि मेरे इस निर्णय का स्वागत मेरा हर साथी और गुजरात की जनता करेगी। मैं मानता हूं कि मेरे इस कदम के बाद मैं भविष्य में गुजरात के लिए सच में सकारात्मक रूप से कार्य कर पाऊँगा। pic.twitter.com/MG32gjrMiY
— Hardik Patel ( Modi Ka Parivar ) (@HardikPatel_) May 18, 2022
ಪಾಟೀದಾರ್ ಸಮುದಾಯದ ನಾಯಕನಾಗಿ ಗುರುತಿಸಿಕೊಂಡಿದ್ದ ಹಾರ್ದಿಕ್ ಪಟೇಲ್ 2019 ರ ಲೋಕಸಬಾ ಚುನಾವಣೆಗೆ ಮುಂಚೆ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದರು.
ಕಳೆದ ಹಲವು ವಾರಗಳಿಂದ ಗುಜರಾತ್ ಕಾಂಗ್ರೆಸ್ ಘಟಕದಲ್ಲಿನ ಆಂತರಿಕ ಕಚ್ಚಾಟದ ಬಗ್ಗೆ ಅವರು ಬಹಿರಂಗವಾಗಿ ಹೇಳುತ್ತಲೇ ಬಂದಿದ್ದು. ಈ ಬೆನ್ನಲ್ಲೇ, ಅವರು ಕಾಂಗ್ರೆಸ್ ತೊರೆಯುತ್ತಾರೆ ಎನ್ನುವ ವರದಿಗಳು ಪ್ರಸಾರವಾಗಿದ್ದು. ಇದೀಗ, ಹಾರ್ದಿಕ ಪಟೇಲ್ ಕಾಂಗ್ರೆಸ್ಗೆ ಅಧಿಕೃತವಾಗಿ ಗುಡ್ ಬೈ ಹೇಳಿದ್ದಾರೆ.