ನಾಗಮಂಗಲದಲ್ಲಿನ ಜೆಡಿಎಸ್ನ ಸಮಾವೇಶದ ವೇಳೆ ಮನೆಯಲ್ಲಿ ಕೂತ ಸಮಅವೇಶ ವೀಕ್ಷಿಸುತ್ತಿದ್ದ ತಂದೆಯನ್ನು ನೋಡಿ ಹೆಚ್ಡಿಕ ಕುಮಾರಸ್ವಅಮಿಯವರು ಕಣ್ಣೀರು ಹಾಕಿದ್ದರು. ಈ ಬಗ್ಗೆ ಬಿಜೆಪಿ ಸರಣಿ ಟ್ವೀಟ್ ಮಾಡಿ ವ್ಯಂಗ್ಯವಾಡಿತ್ತು. ಅಲ್ಲದೇ, ಎಲೆಕ್ಷನ್ ಬಂದ ತಕ್ಷಣ ಜೆಡಿಎಸ್ ನಾಯಕರ ಕಣ್ಣಲ್ಲಿ ನೀರ ಹನಿ ಜಿನುಗುತ್ತಿರುತ್ತದೆ ಎಂದು ಹೇಳಿದ್ದರು.
ಈ ಬಗ್ಗೆ ಬಿಜೆಪಿ ವಿರುದ್ಧ ಆಕ್ರೊಶಗೊಂಡಿರುವ ಜೆಡಿಎಸ್ ನಾಯಕ ಹೆಚ್ಡಿಕುಮಾರಸ್ವಾಮಿಯವರು ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ತಂದೆಯನ್ನು ನೆನೆದು ನಾನು, ನನ್ನ ಸಹೋದರ, ಅಲ್ಲಿದ್ದವರೆಲ್ಲರೂ ಭಾವೋದ್ವೇಗಕ್ಕೆ ಒಳಗಾಗಿ ಕಣ್ಣೀರಿಟ್ಟಿದ್ದನ್ನು ಬಿಜೆಪಿ ವಿಕೃತವಾಗಿ ತಿರುಚಿದೆ. ಇನ್ನೊಬ್ಬರ ಕಣ್ಣೀರಿನ ಬಗ್ಗೆ ಇದೆಂಥಾ ವಿಕಾರ? ಇದೇನಾ ಸಂಘ ಕಲಿಸಿದ ಸಂಸ್ಕಾರ? ಛೇ!!.
ಬಿಜೆಪಿ ವಿಲಕ್ಷಣ, ವಿಕೃತ ಪಕ್ಷ. ಭೀಭತ್ಸ ಬಿಜೆಪಿ. ಅಪರೇಷನ್ ಕಮಲವನ್ನೇ ನೆಚ್ಚಿಕೊಂಡ ವಿನಾಶಕಾರಿ ಪಕ್ಷ. ಕಗ್ಗೊಲೆಗಳೇ ಅದರ ಕಸುಬು, ಬಡ ಯುವಕರ ರಕ್ತವೇ ಅದರ ಪಾಲಿನ ʼಅಧಿಕಾರಾಮೃತʼ. ಅದೆಷ್ಟು ಹೆತ್ತ ಕರುಳುಗಳು ಕಣ್ಣೀರಿಡುತ್ತಿವೆ. ಅದಕ್ಕೆ ಉತ್ತರ ಕೊಡುವ ನೈತಿಕತೆ ಇದೆಯಾ? ಆಮೇಲೆ ನನ್ನ ಕಣ್ಣೀರ ಬಗ್ಗೆ ಮಾತನಾಡಿ ಎಂದು ಆಕ್ರೊಶ ವ್ಯಕ್ತಪಡಿಸಿದ್ದಾರೆ.
ಅಧಿಕಾರ ಹೋಗುವಾಗ ವೇದಿಕೆ ಮೇಲೆ ಕಣ್ಣೀರಧಾರೆ ಹರಿಸಿದ ನಾಯಕ ಹಾಗೂ ಸಿನೆಮಾದಲ್ಲಿ ನಾಯಿ ಸತ್ತ ದೃಶ್ಯ ನೋಡಿ ಮಾಧ್ಯಮಗಳ ಮುಂದೆ ಗಳಗಳನೇ ಕಣ್ಣೀರಕೋಡಿ ಹರಿಸಿದ ಮಹಾಶಯ ಮುಖ್ಯಂಂತ್ರಿ ಯಾವ ಪಕ್ಷದವರು ಎಂದು ನೆನಪಿಸುವ ಮೂಲಕ ಬಿಜೆಪಿಗೆ ತಿವಿದಿದ್ದಾರೆ.
ಹೌದು. ಅಳುವೇ ನಮ್ಮ ಸಹಜ ಧರ್ಮ. ಆದರೆ ನಿಮ್ಮಂತೆ ಇನ್ನೊಬ್ಬರನ್ನು ಅಳಿಸುವ ರಾವಣ ಸಂಸ್ಕೃತಿಯಲ್ಲ. ಬದುಕಿಗೆ ಬೆಂಕಿ ಇಡಲ್ಲ. ಮತ್ತೊಬ್ಬರ ಮಕ್ಕಳ ಸಾವಿನಿಂದ ಉನ್ಮಾದಗೊಂಡು ರಣಕೇಕೆ ಹಾಕುತ್ತಿಲ್ಲ. ಹಿಂಸೆ, ಕಗ್ಗೊಲೆಯೇ ನಿಮ್ಮ ಧರ್ಮ, ಹೌದಲ್ಲವೇ?
ಕೊಲೆಗಳನ್ನೇ ಸೋಪಾನ ಮಾಡಿಕೊಂಡು ʼಕಾಶಿ ಕಾರಿಡಾರುʼ ಮಾಡಿ ಮೆರೆದರೆ ಆ ಶಿವ ಮೆಚ್ಚಾನೆಯೇ?
ಸಾಯಿ ಲೇಔಟ್ ಪುನಾ ತೇಲುತ್ತಿದೆ. ಅರ್ಕಾವತಿ ಲೇಔಟ್ ಪಕ್ಕದ ಆರ್ತನಾದ ಕೇಳುತ್ತಿಲ್ಲವೆ ಬಿಜೆಪಿಗರೇ? ಬೆಂಗಳೂರಿನ ಬಹುತೇಕ ಪ್ರದೇಶಗಳು ಜಲಾವೃತವಾಗಿ ದ್ವೀಪಗಳಾಗಿವೆ. ಅಲ್ಲಿ ಹರಿಯುತ್ತಿರುವುದು ನಿಜಕ್ಕೂ ಜನರ ಕಣ್ಣೀರಧಾರೆ. ʼಕೊಮುಪೊರೆʼಯ ಅಮಲಿನಲ್ಲಿ ಮುಚ್ಚಿಹೋಗಿರುವ ನಿಮ್ಮ ಕಣ್ಣುಗಳಿಗೆ ಜನರ ಕಣ್ಣೀರು ಕಾಣುವುದಿಲ್ಲ, ಅಲ್ಲವೇ?.
ಸರಣಿ ಕಗ್ಗೊಲೆಗಳು,ಆಚಾರ,ವಿಚಾರ,ವ್ಯಾಪಾರ,ಉಡುಗೆ-ತೊಡುಗೆ; ಅಷ್ಟೇ ಏಕೆ? ತಿನ್ನುವ ಅನ್ನದಲ್ಲೂ ನಿಮ್ಮ ವಿಕೃತಿ ಮೆರೆದಿದೆ. ತಂದೆ-ಮಕ್ಕಳ ಬಾಂಧವ್ಯದ ಬಗ್ಗೆ ವಿಕೃತಿ ತೋರುವ ನಿಮಗೆ, ಬಾಂಧವ್ಯಗಳ ಬಗ್ಗೆ ಜನರೇ ಪಾಠ ಕಲಿಸುವ ದಿನ ಹತ್ತಿರದಲ್ಲಿದೆ.
ನಾವು ಮುಳುಗುವುದು, ತೇಲುವುದು ಆಮೇಲೆ. ನಿಮ್ಮನ್ನು ಜನ ಮುಳುಗಿಸಿಬಿಟ್ಟಾರು! ಎಚ್ಚರಿಕೆ!!.
ಮುಂದಿನ ಚುನಾವಣೆಯ ಹವಾಮಾನ ಹೇಗಿರುತ್ತದೆ ಎಂಬುದು ನಿಮಗೂ ಚೆನ್ನಾಗಿ ಗೊತ್ತು. ಎಷ್ಟು ಸಮೀಕ್ಷೆ ಮಾಡಿಸಿದ್ದೀರಿ ಅನ್ನುವುದು ನನಗೂ ಗೊತ್ತು. ಮೂರಂಕಿ ಮೀರದ ನೀವು ವಿಕೃತಿ ಮೆರೆದು ರಕ್ತಪಾತ ಸೃಷ್ಟಿಸುತ್ತಿದ್ದೀರಿ. ಪ್ರತಿಕೂಲಕರ ವಾತಾವರಣ ಯಾರಿಗೆ ಸೃಷ್ಟಿಯಾಗುತ್ತದೋ ಕಾದು ನೋಡುವಿರಂತೆ ಎಂದು ಸರಣಿ ಟ್ವೀಟ್ ಮಾಡಿ ಕುಮಾರಸ್ವಾಮಿಯವರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.