`ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾಗಿ ಕೆಲಸ ಮಾಡಿದವರು. ಹಲವು ಕ್ಷೇತ್ರಗಳಲ್ಲಿ ಉತ್ತಮವಾಗಿ ಕೆಲಸ ಮಾಡಿದ್ದೇನೆ ಎಂಬ ಭಾವನೆ ಅವರಿಗಿದೆ. ಅವರ ಕಾರ್ಯಕರ್ತರು ಅವರನ್ನು ಕರೆಯುತ್ತಿದ್ದಾರೆ’ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಹೇಳಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಚಿಕ್ಕಮುಚ್ಚಳಗುಡ್ಡದಲ್ಲಿ ಮಾಧ್ಯಮದವರ ಪ್ರಶ್ನೆಗೆ ಹೆಚ್ಡಿಕೆ ಉತ್ತರಿಸಿದರು.
`ಕ್ಷೇತ್ರ ಹುಡುಕಾಟದ ಬಗ್ಗೆ ಲಘುವಾಗಿ ಮಾತಾಡಲ್ಲ. ಅವರು ಎಲ್ಲಿ ಬೇಕಾದರೂ ನಿಲ್ಲಬಹುದು, ಗೆಲ್ಲಬಹುದು. ಮನುಷ್ಯನಿಗೆ ಸೋಲು, ಗೆಲುವು ಸರ್ವೆ ಸಾಮಾನ್ಯ’ ಎಂದು ಕುಮಾರಸ್ವಾಮಿ ಹೇಳಿದ್ದಾರೆ.