ಆರೋಗ್ಯ ಸಚಿವ ಡಾ ಕೆ ಸುಧಾಕರ್ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಸ್ವತಃ ಆರೋಗ್ಯ ಸಚಿವರೇ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾರೆ.
ಮೂರು ಅಲೆಗಳ ಸಂದರ್ಭದಲ್ಲೂ ಕೋವಿಡ್ ಸೋಂಕಿನಿAದ ಪಾರಾಗಿದ್ದ ನಾನು ಈಗ ಸೋಂಕಿಗೆ ತುತ್ತಾಗಿದ್ದೇನೆ. ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದಾಗ ಪಾಸಿಟಿವ್ ಆಗಿರುವುದು ಪತ್ತೆಯಾಗಿದೆ. ಕೆಲ ರೋಗ ಲಕ್ಷಣಗಳು ಕಾಣಿಸಿಕೊಂಡಿದ್ದು ಹೋಮ್ ಐಸೋಲೇಷನ್ ನಲ್ಲಿ ಇದ್ದುಕೊಂಡೇ ಚಿಕಿತ್ಸೆ ಪಡೆಯುತ್ತಿದ್ದೇನೆ
ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಮಾಹಿತಿ ನೀಡಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರಿಗೂ ನಿನ್ನೆ ಕೋವಿಡ್ ಸೋಂಕು ದೃಢಪಟ್ಟಿತ್ತು.