ಕರಾವಳಿ ಜಿಲ್ಲೆಗಳಲ್ಲಿ ಇನ್ನೆರಡು ದಿನ ಧಾರಾಕಾರ ಮಳೆ ಆಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ರಜೆ ಘೋಷಿಸಲಾಗಿದೆ.
ನಾಳೆ ಅಂದರೆ ಜುಲೈ 1ರಂದು ಉಡುಪಿ ಜಿಲ್ಲೆಯ ಅಂಗನವಾಡಿ, ಸರಕಾರಿ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಮತ್ತು ಪದವಿಪೂರ್ವ ಮತ್ತು ಪದವಿ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ರಜೆ ಘೋಷಿಸಿ ಜಿಲ್ಲಾಧಿಕಾರಿ ಕೂರ್ಮರಾವ್ ಆದೇಶ ಹೊರಡಿಸಿದ್ದಾರೆ.