ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ರಾತ್ರಿಯಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಇದರಿಂದಾಗಿ ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಮಂಗಳೂರು ನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಕ್ಕಳು ಈಗಾಗಲೇ ಶಾಲೆಗೆ ಬಂದಿದ್ದರೆ ಆ ಶಾಲೆ ಎಲ್ಲಾ ಮುಂಜಾಗ್ರತೆ ಕ್ರಮ ಕೈಗೊಂಡು ಕಾರ್ಯನಿರ್ವಹಿಸಬೇಕು. ಉಳಿದಂತೆ ಗ್ರಾಮೀಣ ಭಾಗದ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಇದೇ ರೀತಿ ಇಂದು ಮಳೆ ಮುಂದುವರೆದರೆ ನಾಳೆ ಶಾಲಾ-ಕಾಲೇಜುಗಳಿಗೆ ರಜೆ ನೀಡುವ ಬಗ್ಗೆ ನಿರ್ಧರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಹೇಳಿದ್ದಾರೆ.