ದಕ್ಷಿಣ ಕನ್ನಡದಲ್ಲಿ ಬುಧವಾರದ ರಾತ್ರಿಯಿಂದ ಧಾರಾಕಾರ ಮಳೆ ಸುರಿಯುತ್ತಿದೆ.
ಆ ಹಿನ್ನೆಲೆಯಲ್ಲಿ ಜುಲೈ 1ಕ್ಕೆ ಜಿಲ್ಲಾದ್ಯಂತ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.
ಬುಧವಾರ ರಾತ್ರಿ ಹೆಚ್ಚಿನ ಮಳೆ ಬಂದ ಹಿನ್ನೆಲೆಯಲ್ಲಿ ಇಂದು ಗುರುವಾರವೂ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು.