ಮುಸಲ್ಮಾನರ ವಿರುದ್ಧ ಆಕ್ಷೇಪಾರ್ಹವಾದ ಹೇಳಿಕೆಗಳನ್ನು ನೀಡಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಶೇಖರ್ ಕುಮಾರ್ ಯಾದವ್ ವಿರುದ್ಧ ಸುಪ್ರೀಂಕೋರ್ಟ್ ಕ್ರಮಕೈಗೊಳ್ಳುವ ಸಾಧ್ಯತೆ ಇದೆ.
ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಶೇಖರ್ ಕುಮಾರ್ ಯಾದವ್ ಮಾಡಿರುವ ಭಾಷಣಗಳ ಬಗ್ಗೆ ವರದಿಯನ್ನು ಸಲ್ಲಿಸುವಂತೆ ಸುಪ್ರೀಂಕೋರ್ಟ್ ಅಲಹಾಬಾದ್ ಹೈಕೋರ್ಟ್ನ ರಿಜಿಸ್ಟ್ರಾರ್ ಅವರಿಗೆ ಸೂಚಿಸಿದೆ. ಪತ್ರಿಕೆಗಳಲ್ಲಿ ಆದ ವರದಿಗಳನ್ನು ಆಧರಿಸಿ ಸುಪ್ರೀಂಕೋರ್ಟ್ ಈ ಕ್ರಮ ಕೈಗೊಂಡಿದೆ.
ಡಿಸೆಂಬರ್ 8ರಂದು ಭಾನುವಾರ ಉತ್ತರಪ್ರದೇಶದಲ್ಲಿ ವಿಶ್ವ ಹಿಂದೂ ಪರಿಷತ್ ಆಯೋಜಿಸಿದ್ದ ʻಏಕರೂಪ ನಾಗರಿಕ ಸಂಹಿತೆಯ ಸಂವಿಧಾನಿಕ ಅನಿವಾರ್ಯತೆʼ ಕುರಿತ ವಿಚಾರ ಸಂಕಿರಣದಲ್ಲಿ ನೇರವಾಗಿ ಮುಸಲ್ಮಾನರನ್ನು ಗುರಿಯಾಗಿಸಿ ನ್ಯಾಯಮೂರ್ತಿ ಶೇಖರ್ ಕುಮಾರ್ ಯಾದವ್ ಟೀಕೆ ಟಿಪ್ಪಣಿಗಳನ್ನು ಮಾಡಿದ್ದರು.
ನ್ಯಾಯಮೂರ್ತಿ ಶೇಖರ್ ಕುಮಾರ್ ಯಾದವ್ ವಿರುದ್ಧ ʻನ್ಯಾಯಾಂಗ ಹೊಣೆಗಾರಿಕೆ ಮತ್ತು ಸುಧಾರಣೆಗಳಿಗಾಗಿ ಅಭಿಯಾನʼ ಸಂಸ್ಥೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರಿಗೆ ಸುದೀರ್ಫ ಪತ್ರವನ್ನು ಬರೆದು ದೂರು ನೀಡಿತ್ತು.
2019ರಲ್ಲಿ ಅಲಹಾಬಾದ್ ಹೈಕೋರ್ಟ್ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದ ಶೇಖರ್ ಕುಮಾರ್ ಯಾದವ್, 2021ರಲ್ಲಿ ಶಾಶ್ವತ ನ್ಯಾಯಮೂರ್ತಿಯಾಗಿ ಬಡ್ತಿ ಪಡೆದರು. 2026ರಲ್ಲಿ ಇವರು ಸೇವೆಯಿಂದ ನಿವೃತ್ತರಾಗಲಿದ್ದಾರೆ.
ADVERTISEMENT
ADVERTISEMENT