ADVERTISEMENT
ಕರ್ನಾಟಕದಲ್ಲಿ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಯಲಿದೆ.
ಪಬ್ಲಿಕ್ ಪರೀಕ್ಷೆಗೆ ಹೊಸ ದಿನಾಂಕ ನಿಗದಿ ಮಾಡುವಂತೆ ಕರ್ನಾಟಕ ಹೈಕೋರ್ಟ್ನ ದ್ವಿಸದಸ್ಯ ಪೀಠ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಮಾರ್ಚ್ 27ರಿಂದ ಪಬ್ಲಿಕ್ ಪರೀಕ್ಷೆ ನಡೆಯಲಿದೆ.
ಪಬ್ಲಿಕ್ ಪರೀಕ್ಷೆ ನಡೆಸುವ ಸಂಬಂಧ ಹೊರಡಿಸಿದ್ದ ಸುತ್ತೋಲೆಯನ್ನು ಏಕಸದಸ್ಯ ಪೀಠ ವಜಾಗೊಳಿಸಿತ್ತು.
ಏಕಸದಸ್ಯ ಪೀಠದ ಆದೇಶದ ವಿರುದ್ಧ ಸರ್ಕಾರ ಹೈಕೋರ್ಟ್ನ ದ್ವಿಸದಸ್ಯ ಪೀಠದಲ್ಲಿ ಮೇಲ್ಮನವಿ ಸಲ್ಲಿಸಿತ್ತು.
ಮೇಲ್ಮನವಿ ಪುರಸ್ಕರಿಸಿದ ಹೈಕೋರ್ಟ್ ಪರೀಕ್ಷೆಗೆ ಹೊಸ ಸುತ್ತೋಲೆ ಹೊರಡಿಸಿದ 10 ದಿನದೊಳಗೆ ಪರೀಕ್ಷೆ ನಡೆಸುವಂತೆ ಹೇಳಿದೆ.
ಮಾರ್ಚ್ 13ರಂದು ನಿಗದಿ ಆಗಿದ್ದ ಪರೀಕ್ಷೆಯನ್ನು ಶಿಕ್ಷಣ ಇಲಾಖೆ ಮುಂದೂಡಿತ್ತು.
ADVERTISEMENT