ಕಳೆದ 14 ದಿನದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ರೂ. 9, ಮನೆಬಳಕೆ ಗ್ಯಾಸ್ ಬೆಲೆ ರೂ. 50, ವಾಣಿಜ್ಯ ಬಳಕೆಯ ಗ್ಯಾಸ್ ಬೆಲೆ ರೂ. 250 ಜಾಸ್ತಿಯಾಗಿದೆ.
ತೈಲ ಮಾರಾಟ ಮಾಡುವ ಸ್ವಾಯತ್ತ ಸಂಸ್ಥೆಗಳು ಅಂತಾರಾಷ್ಟ್ರೀಯ ಕಚ್ಚಾ ತೈಲಬೆಲೆ ಏರಿಳಿತಗಳಿಗೆ ಅನುಗುಣವಾಗಿ ಬೆಲೆ ಏರಿಕೆ ಮಾಡುತ್ತಿವೆ ಎಂದು BJPಸರ್ಕಾರ ಕುಂಟು ನೆಪ ಹೇಳುತ್ತಿದೆ.
ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ನಿಯಂತ್ರಣ ಮಾಡುವುದು ಸ್ವಾಯತ್ತ ಸಂಸ್ಥೆಗಳಾಗಿದ್ದರೆ ಕಳೆದ ವರ್ಷ ನವೆಂಬರ್ ನಿಂದ ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಬರುವವರೆಗೆ ಅಂದರೆ ಮಾರ್ಚ್ ಹದಿನೈದರ ವರೆಗೆ ಏಕೆ ದರ ಏರಿಕೆ ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.
ಇದೆ ವೇಳೆ ಕೇಂದ್ರ ಸರ್ಕಾರ ಹೇಳುತ್ತಿರುವ ಸುಳ್ಳಿನ ಲೆಕ್ಕವನ್ನು ಸಿದ್ದರಾಮಯ್ಯ ಬಿಚ್ಚಿಟ್ಟಿದ್ದಾರೆ.
2014 ರ ಏಪ್ರಿಲ್ ನಲ್ಲಿ ಯು.ಪಿ.ಎ ಸರ್ಕಾರದ ಕೊನೆಯಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಬ್ಯಾರಲ್ ಒಂದಕ್ಕೆ 108 ಡಾಲರ್ ಇತ್ತು, ಆಗ ದೇಶದಲ್ಲಿ ಡೀಸೆಲ್ ಬೆಲೆ 55 ರೂಪಾಯಿ 49 ಪೈಸೆ, ಪೆಟ್ರೋಲ್ ಬೆಲೆ 71 ರೂಪಾಯಿ 41 ಪೈಸೆ ಇತ್ತು.
ಯುಪಿಎ ಸರ್ಕಾರದ ಅವಧಿಯಲ್ಲಿ ಡೀಸೆಲ್ ಮೇಲೆ ಹೆಚ್ಚುವರಿ ಅಬಕಾರಿ ಸುಂಕ 3 ರೂಪಾಯಿ 46 ಪೈಸೆ, ಪೆಟ್ರೋಲ್ ಮೇಲೆ 9 ರೂಪಾಯಿ 20 ಪೈಸೆ ಇತ್ತು. ಆದರೇ, narendramodi ಅವರು ಪ್ರಧಾನಿಯಾದ ಮೇಲೆ ಪೆಟ್ರೋಲ್ ಮೇಲೆ 18 ರೂಪಾಯಿ 70 ಪೈಸೆ, ಡೀಸೆಲ್ ಮೇಲೆ 18 ರೂಪಾಯಿ 34 ಪೈಸೆ ಅಬಕಾರಿ ಸುಂಕ ಹೆಚ್ಚಿಸಲಾಗಿದೆ.
ಯಾವ ದೇಶದಲ್ಲಿ ಇರದಷ್ಟು ಅಬಕಾರಿ ಸುಂಕವನ್ನು ತೈಲದ ಮೇಲೆ ಹಾಕಲಾಗಿದೆ. ಡೀಸೆಲ್ ಮೇಲೆ ಹೆಚ್ಚುವರಿಯಾಗಿ ಬರೋಬ್ಬರಿ 531% ಅಬಕಾರಿ ಸುಂಕ, ಪೆಟ್ರೋಲ್ ಮೇಲೆ 203% ಏರಿಕೆ ಮಾಡಲಾಗಿದೆ. ಆದರೇ, ಕಾರ್ಪೊರೇಟ್ ತೆರಿಗೆಯನ್ನು 35% ಇಂದ 23% ಗೆ ಇಳಿಸಿ, ಸಾಮಾನ್ಯ ಜನರ ಮೇಲೆ ತೆರಿಗೆ ಬರೆ ಹಾಕಲಾಗಿದೆ ಎಂದು ಅಂಕಿ ಅಂಶ ಸಮೇತ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಇದೇನಾ @narendramodi ಅವರ ಅಚ್ಚೇದಿನ್? ಎಂದು ಪ್ರಶ್ನೆ ಮಾಡಿದ್ದಾರೆ.
ಕೇವಲ ಹೆಚ್ಚುವರಿ ಅಬಕಾರಿ ಸುಂಕವೊಂದನ್ನೇ ಏರಿಕೆ ಮಾಡಿದ್ದರಿಂದ ಕೇಂದ್ರ ಸರ್ಕಾರಕ್ಕೆ ಕಳೆದ ಎಂಟೇ ವರ್ಷಗಳಲ್ಲಿ 26 ಲಕ್ಷ ಕೋಟಿ ರೂಪಾಯಿ ಆದಾಯ ಬಂದಿದೆ. narendramodi ಸರ್ಕಾರ ಕೊಳ್ಳೆಹೊಡೆದ ಈ ಹಣಕ್ಕೆ ಮೊದಲು ಲೆಕ್ಕ ಕೊಡಲಿ ಎಂದು ಒತ್ತಾಯಿಸಿದ್ದಾರೆ.
ಹಿಂದಿನ ಸರ್ಕಾರಗಳು ಸಾಲ ಮಾಡಿದ್ದವು ಅದನ್ನು ತೀರಿಸಲು ಪೆಟ್ರೋಲ್ ಬೆಲೆ ಹೆಚ್ಚು ಮಾಡಬೇಕಾಯ್ತು ಎಂಬ ವಿತ್ತ ಸಚಿವೆ nsitharaman ಹೇಳಿಕೆ ಹಸಿ ಸುಳ್ಳು. BJP ಸರ್ಕಾರ ಸಣ್ಣ ಸಾಲ ತೋರಿಸಿ ದೊಡ್ಡ ಸಾಗರವನ್ನೇ ಕೊಳ್ಳೆ ಹೊಡೆದಿದೆ. ವಾಜಪೇಯಿ ಸರ್ಕಾರವೂ ಸೇರಿದಂತೆ ಹಿಂದಿನ ಸರ್ಕಾರಗಳು ಒಟ್ಟು 2 ಲಕ್ಷದ 20 ಸಾವಿರ ಕೋಟಿ ತೈಲ ಬಾಂಡ್ ಗಳ ಮೇಲೆ ಸಾಲ ಮಾಡಿದ್ದವು, ಅದರಲ್ಲಿ narendramodi ಸರ್ಕಾರ ಪಾವತಿಸಿರುವ ಹಣ ರೂ. 3,500 ಕೋಟಿ ಮಾತ್ರ. ಆದರೆ ವಸೂಲಿ ಮಾಡಿದ್ದು 26 ಲಕ್ಷ ಕೋಟಿ ರೂಪಾಯಿ.ಇದು ಮೋಸ ಅಲ್ಲದೆ ಮತ್ತೇನು? ಎಂದು ಗುಡುಗಿದ್ದಾರೆ.
ಕೇಂದ್ರದ BJP ಮತ್ತು ರಾಜ್ಯ BJP ಸರ್ಕಾರಗಳು ಸೇರಿ ಪ್ರತೀ ಲೀಟರ್ ಡೀಸೆಲ್ ಮೇಲೆ 32 ರೂಪಾಯಿ, ಪೆಟ್ರೋಲ್ ಮೇಲೆ 47 ರೂಪಾಯಿ ತೆರಿಗೆ ವಸೂಲಿ ಮಾಡುತ್ತಿವೆ. ಇದರಲ್ಲಿ ಅರ್ಧದಷ್ಟು ಕಡಿಮೆಯಾದರೂ ಕೋಟ್ಯಂತರ ಬಡ ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟಾರು. ಈ ಕಡೆ ಗಮನಹರಿಸಿ ಎಂದು ಸರ್ಕಾರಕ್ಕೆ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.