ಕರ್ನಾಟಕ ಹೈಕೋರ್ಟ್ ನೀಡಿದ್ದ ಹಿಜಾಬ್ ತೀರ್ಪಿನ (Hijab Controversy) ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು. ಈ ಮೇಲ್ಮನವಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಇಂದು ಅಂತ್ಯಗೊಳಿಸಿದ್ದು, ತೀರ್ಪನ್ನು ಕಾಯ್ದಿರಿಸಿದೆ.
ಪದವಿ ಪೂರ್ವ ಕಾಲೇಜುಗಳಲ್ಲಿ ಸಮವಸ್ತ್ರ ನೀತಿಯನ್ನು ಕಡ್ಡಾಯವಾಗಿ ಪಾಲಿಸಬೇಕು. ಹಿಜಾಬ್ ಗೆ ಅನುಮತಿ ಇಲ್ಲ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಇದರ ವಿರುದ್ಧ ಮುಸ್ಲಿಂ ವಿದ್ಯಾರ್ಥಿನಿಯರು ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ್ದ ರಾಜ್ಯ ಹೈಕೋರ್ಟ್ ತರಗತಿಯ ಒಳಗಡೆ ಮಾತ್ರ ಹಿಜಾಬ್ ಧರಿಸುವಂತಿಲ್ಲ. ಶಾಲಾ ಆವರಣದಲ್ಲಿ ಹಾಗೂ ಬಸ್ಸಿನ ಒಳಗಡೆ ಹಿಜಾಬ್ ಧರಿಸಬಹುದು ಎಂದು ತೀರ್ಪು ನೀಡಿತ್ತು.
ಈ ತೀರ್ಪಿನ (Hijab Controversy) ವಿರುದ್ಧ ಮತ್ತೆ ಆ ಮುಸ್ಲಿಂ ವಿದ್ಯಾರ್ಥಿನಿಯರು ಹಾಗೂ ಇತರರು ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಕಳೆದ ಒಂದು ವಾರದಿಂದ ಸುಪ್ರೀಂಕೋರ್ಟ್ ಎರಡು ಕಡೆಯ ವಾದಗಳನ್ನು ಆಲಿಸಿದ್ದು, ಇಂದು ವಿಚಾರಣೆ ಅಂತ್ಯಗೊಳಿಸಿದೆ. ತೀರ್ಪನ್ನು ಕಾಯ್ದಿರಿಸಿದೆ.
ಇದನ್ನೂ ಓದಿ : ಹಿಜಾಬ್ ತೀರ್ಪಿನ ವಿರುದ್ಧ ಮೇಲ್ಮನವಿ : ಅರ್ಜಿ ಪರಿಶೀಲನೆ ನಡೆಸಲು ಸುಪ್ರೀಂ ಕೋರ್ಟ್ ಸಮ್ಮತಿ