ಹಿಜಾಬ್ ವಿವಾದದ (Hijab Row Case) ಕುರಿತು ರಾಜ್ಯ ಹೈಕೋರ್ಟ್ ನೀಡಿರುವ ಆದೇಶಕ್ಕೆ ತಡೆ ನೀಡುವಂತೆ ಕೋರಿರುವ ಅರ್ಜಿಗಳ ವಿಚಾರಣೆಯನ್ನು ಇಂದು ಸುಪ್ರೀಂಕೋರ್ಟ್ ವಿಚಾರಣೆ ನಡೆಸಿತು. ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ವಿಚಾರಣೆ ಮುಂದೂಡಿದೆ.
ಇಂದು ಹಿಜಾಬ್ ವಿವಾದದ ಪ್ರಕರಣವನ್ನು (Hijab Row Case) ಸುಪ್ರೀಂಕೋರ್ಟ್ ಕೈಗೆತ್ತಿಕೊಂಡಿದೆ. ರಾಜ್ಯ ಸರ್ಕಾರದ ಆದೇಶಕ್ಕೆ ತಡೆ ನೀಡುವಂತೆ ಕೋರಿದ ಮಧ್ಯಂತರ ಆದೇಶಕ್ಕೆ ಸುಪ್ರೀಂಕೋರ್ಟ್ ನಕಾರ ವ್ಯಕ್ತಪಡಿಸಿದೆ.
ಮುಂದಿನ ಸೋಮವಾರ ಸೆ.5ಕ್ಕೆ ಮುಂದಿನ ವಿಚಾರಣೆಯನ್ನು ಮುಂದೂಡಿ ಸುಪ್ರೀಂಕೋರ್ಟ್ ಆದೇಶಿಸಿದೆ.
ಇದನ್ನೂ ಓದಿ : ಹಿಜಾಬ್ ತೀರ್ಪಿನ ವಿರುದ್ಧ ಮೇಲ್ಮನವಿ : ಅರ್ಜಿ ಪರಿಶೀಲನೆ ನಡೆಸಲು ಸುಪ್ರೀಂ ಕೋರ್ಟ್ ಸಮ್ಮತಿ
ರಾಜ್ಯ ಸರ್ಕಾರದ ಆದೇಶಕ್ಕೆ ತಡೆ ನೀಡಬೇಕು. ಹಾಗೆಯೇ ರಾಜ್ಯ ಹೈಕೋರ್ಟ್ ತೀರ್ಪಿಗೆ ತಡೆ ನೀಡಬೇಕು ಎಂದು ಕೋರಿ ಸುಪ್ರೀಂಕೋರ್ಟ್ಮನಲ್ಲಿ ಬರೋಬ್ಬರಿ 24 ಮೇಲ್ಮನವಿ ಅರ್ಜಿಗಳು ಸಲ್ಲಿಕೆಯಾಗಿವೆ.
ರಾಜ್ಯದಲ್ಲಿ ಹಿಜಾಬ್ ವಿವಾದದ ತೀರ್ಪು ಬಂದ ಬೆನ್ನಲ್ಲೇ, ಶೀಘ್ರ ವಿಚಾರಣೆಗೆ ಕೈಗೆತ್ತಿಕೊಳ್ಳುವಂತೆ ಈ ಮೇಲ್ಮನವಿ ಅರ್ಜಿಗಳನ್ನು ಸಲ್ಲಿಸಲಾಗಿತ್ತು. ಆದರೆ, ಶೀಘ್ರ ವಿಚಾರಣೆಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿತ್ತು. ಇದೀಗ ಈ ಅರ್ಜಿಗಳ ವಿಚಾರಣೆ ಆರಂಭವಾಗಿದೆ.
ಇದನ್ನೂ ಓದಿ : ಉಡುಪಿ : ಹಿಜಾಬ್ ವಿವಾದ – ಪರೀಕ್ಷೆ ಬಹಿಷ್ಕರಿಸಿದ 40 ವಿದ್ಯಾರ್ಥಿನಿಯರು