ಕಲಬುರ್ಗಿ ಜಿಲ್ಲೆಯಲ್ಲಿ ಮಳೆಗೆ ಇಂದು ಒಬ್ಬರು ಸಾವನ್ನಪ್ಪಿದ್ದಾರೆ. ಭಾರೀ ಮಳೆಯಿಂದಾಗಿ ಮನೆ ಕುಸಿದು ವೃದ್ದೆ ಸಾವನ್ನಪ್ಪಿದ್ದು, ಮತ್ತಿಬ್ಬರಿಗೆ ಗಾಯಗಳಾಗಿವೆ.
ಕಲಬುರಗಿಯ ಚಿತ್ತಾಪೂರ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಆರೀಫಾ ಬೇಗಂ (60) ಮೃತ ವೃದ್ದೆ. ಘಟನೆಯಲ್ಲಿ ಆರೀಫಾ ಬೇಗಂ ಪತಿ ಸರ್ಧಾರ್ ಅಲಿ ಹಾಗೂ ಮಗಳು ಯಾಸ್ಮಿನ್ ಬೇಗಂಗೆ ಸಣ್ಣ-ಪುಟ್ಟ ಗಾಯಗಳಾಗಿವೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಚಿತ್ತಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.