ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸುವ ಅವಧಿಯನ್ನು ರಾಜ್ಯ ಸರ್ಕಾರ ವಿಸ್ತರಿಸಿದೆ. ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸುವ ಅವಧಿಯನ್ನು ಸೆಪ್ಟೆಂಬರ್ 15ರವರೆಗೆ ವಿಸ್ತರಿಸಲಾಗಿದೆ.
ಈ ಸಂಬಂಧ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.
ಏಪ್ರಿಲ್ 1, 2019ಕ್ಕೂ ಮೊದಲು ನೋಂದಣಿ ಆಗಿರುವ ವಾಹನಗಳಿಗೆ ಹೆಚ್ಎಸ್ಆರ್ಪಿ ನಂಬರ್ ಪ್ಲೆಟ್ ಅಳಡಿಸುವುದು ಕಡ್ಡಾಯವಾಗಿದೆ. ಹೆಚ್ಎಸ್ಆರ್ಪಿ ನಂಬರ್ಪ್ಲೇಟ್ ಇಲ್ಲದ ವಾಹನಗಳಿಗೆ ದಂಡ ವಿಧಿಸಲು ಅವಕಾಶವಿದೆ.
ಆದರೆ ಈಗ ಸ್ವತಃ ರಾಜ್ಯ ಸರ್ಕಾರವೇ ಅವಧಿ ವಿಸ್ತರಣೆ ಮಾಡಿರುವ ಹಿನ್ನೆಲೆಯಲ್ಲಿ ವಾಹನ ಮಾಲೀಕರು ನಿರಾಳರಾಗಿದ್ದಾರೆ.
ADVERTISEMENT
ADVERTISEMENT