ಹೈದ್ರಾಬಾದ್ನ (Hyderbad) ಎಲೆಕ್ಟ್ರಿಕ್ ಬೈಕ್ ಶೋ ರೂಂ ಒಂದರಲ್ಲಿ ಸೋಮವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿದೆ. ಈ ದುರಂತದಲ್ಲಿ 8 ಜನ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಶೋ ರೂಂ ಮೇಲಿನ ಮಹಡಿಯಲ್ಲಿರುವ ಲಾಡ್ಜ್ಗೂ ಬೆಂಕಿ ವ್ಯಾಪಿಸಿದೆ. ಹಲವು ಎಲೆಕ್ಟ್ರಿಕ್ ಸ್ಕೂಟರ್ಗಳು ಸುಟ್ಟು ಹೋಗಿವೆ. ಗಾಯಾಳುಗಳನ್ನು ನಗರದ ಗಾಂಧಿ ಮತ್ತು ಯಶೋಧಾ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಇದನ್ನೂ ಓದಿ : ‘ಹೀರೋ’ ಸಿನೆಮಾ ಚಿತ್ರೀಕರಣ ವೇಳೆ ಬೆಂಕಿ ಅವಘಡ: ಅಪಾಯದಿಂದ ಪಾರಾದ ಸ್ಯಾಂಡಲ್ವುಡ್ ಮಾಸ್ಟರ್ ಮೈಂಡ್ ಡೈರೆಕ್ಟರ್
ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಶ್ರಮಿಸುತ್ತಿದ್ದು, ದುರಂತಕ್ಕೆ ಕಾರಣ ಏನು ಎಂಬುದು ತಿಳಿದುಬಂದಿಲ್ಲ.
ಹೈದ್ರಾಬಾದ್ನ (Hyderbad)ನಲ್ಲಿ ಕಟ್ಟಡದ ನೆಲ ಮಹಡಿಯಲ್ಲಿರುವ ಶೋ ರೂಂನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದರಿಂದಾಗಿ ಮೇಲಿನ ಮಹಡಿಯಲ್ಲಿರುವ ರೂಬಿ ಲಾಡ್ಜ್ನಲ್ಲಿ ದಟ್ಟ ಹೊಗೆ ಆವರಿಸಿದೆ. ಅಗ್ನಿ ಶಾಮಕ ಸಿಬ್ಬಂದಿ 9 ಜನರನ್ನು ರಕ್ಷಿಸಿದ್ದಾರೆ ಎಂದು ತಿಳಿದುಬಂದಿದೆ. ಲಾಡ್ಜ್ನಲ್ಲಿದ್ದ ಹಲವು ಜನ ಪ್ರಾಣ ಉಳಿಸಿಕೊಳ್ಳುಳು ಕಿಟಕಿಗಳ ಮೂಲಕ ಹೊರ ಜಿಗಿದಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಇದನ್ನೂ ಓದಿ : ಆಸ್ಪತ್ರೆಗೆ ಬೆಂಕಿ ಅವಘಡ – 10 ಜನ ಸಜೀವ ದಹನ