ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ವಿರುದ್ಧ ರಾಜ್ಯ ಸರ್ಕಾರ ಇಲಾಖಾ ತನಿಖೆಗೆ ಆದೇಶ ನೀಡಿದೆ.
ಮೈಸೂರು ಜಿಲ್ಲಾಧಿಕಾರಿಯಾಗಿದ್ದ ವೇಳೆ ಜಿಲ್ಲಾಧಿಕಾರಿ ನಿವಾಸ ನವೀಕರಣ ಮತ್ತು ಬಟ್ಟೆ ಬ್ಯಾಗ್ ಖರೀದಿಯಲ್ಲಿ ನಿಯಮ ಉಲ್ಲಂಘಿಸಿದ ಆರೋಪ ರೋಹಿಣಿ ಸಿಂಧೂರಿ ಅವರ ವಿರುದ್ಧವಿದೆ.
ತಮ್ಮ ವಿರುದ್ಧದ ಆರೋಪಗಳ ಸಂಬಂಧ ನಡೆದ ಪ್ರಾಥಮಿಕ ತನಿಖೆಯಲ್ಲಿ ರೋಹಿಣಿ ಸಿಂಧೂರಿ ಸರಿಯಾದ ಉತ್ತರ ನೀಡದ ಮತ್ತು ದಾಖಲೆಗಳನ್ನು ನೀಡದ ಹಿನ್ನೆಲೆಯಲ್ಲಿ ಇಲಾಖಾ ತನಿಖೆಗೆ ಸೂಚಿಸಲಾಗಿದೆ.
ನಿವೃತ್ತ ಐಎಎಸ್ ಅಧಿಕಾರಿ ಯೋಗೇಂದ್ರ ತ್ರಿಪಾಠಿ ಮತ್ತು ಐಎಎಸ್ ಅಧಿಕಾರಿ ಉಜ್ವಲ್ ಕುಮಾರ್ ಘೋಷ್ ನೇತೃತ್ವದಲ್ಲಿ ತನಿಖಾ ಸಮಿತಿ ರಚಿಸಲಾಗಿದೆ.
ಮೈಸೂರು ಜಿಲ್ಲೆ ಕೆ ಆರ್ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ವೇಳೆ ಸಾ ರಾ ಮಹೇಶ್ ಅವರು ರೋಹಿಣಿ ಸಿಂಧೂರಿ ವಿರುದ್ಧ ಅಕ್ರಮಗಳ ಆರೋಪ ಮಾಡಿದ್ದರು ಮತ್ತು ವಿಧಾನಸಭೆಯಲ್ಲೂ ಪ್ರಸ್ತಾಪಿಸಿದ್ದರು.
ADVERTISEMENT
ADVERTISEMENT