ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಭಾರತದ ವಿರುದ್ಧ ಆಸ್ಟ್ರೇಲಿಯಾ ಆರು ವಿಕೆಟ್ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದೆ.
ಟಾಸ್ ಗೆದ್ದ ಆಸ್ಟ್ರೇಲಿಯಾ ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ 50 ಓವರ್ಗಳಲ್ಲಿ 277/7 ರನ್ ಗಳಿಸಿತ್ತು.
The game went till the final over! #TeamIndia fought hard right till the end but Australia 🇦🇺 clinch a 6-wicket victory
India will look to bounce back in the remaining two matches 💪#CWC22 | #INDvAUS pic.twitter.com/jL4CekzzSv
— BCCI Women (@BCCIWomen) March 19, 2022
278 ರನ್ ಗುರಿ ಬೆನ್ನತ್ತಿದ್ದ ಆಸ್ಟ್ರೇಲಿಯಾ 49.3 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರಿತು. ನಾಯಕಿ ಮೆಗ್ ಲ್ಯಾನಿಂಗ್ 97, ಅಲೈಸಾ ಹೀಲಿ 72 ರನ್ ಗಳಿಸಿ ತಂಡಕ್ಕೆ ಆಸರೆಯಾದರು.