ಸಂಗೀತ ಮಾಂತ್ರಿಕ, ಹಾಲಿ ರಾಜ್ಯ ಸಭಾ ಸದಸ್ಯರಾದ ಇಳಯರಾಜ ಅವರನ್ನು ತಮಿಳುನಾಡಿನ ದೇವಸ್ಥಾನವೊಂದರಲ್ಲಿ ಪ್ರವೇಶ ಮಾಡಲು ನಿರಾಕರಿಸಿದ ಘಟನೆಯು ನಿಜಕ್ಕೂ ಅವಮಾನಕರ ಸಂಗತಿ ಆಗಿದ್ದು, ಸಮಾಜದಲ್ಲಿ ಜಾತಿ ತಾರತಮ್ಯ ಮತ್ತು ಅಸ್ಪೃಶ್ಯತೆಯು ಇನ್ನೂ ಜೀವಂತವಾಗಿದೆ ಎಂಬುದನ್ನು ಸಾರಿ ಹೇಳುತ್ತಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ ಹೆಚ್ ಸಿ ಮಹದೇವಪ್ಪ ಅವರು ಕಿಡಿಕಾರಿದ್ದಾರೆ.
ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿ, ರಾಷ್ಟ್ರ ಮಟ್ಟದಲ್ಲಿ ಖ್ಯಾತಿ ಗಳಿಸಿದವರ ಸ್ಥಿತಿಯೇ ಹೀಗಿದ್ದರೆ, ಸಾಮಾನ್ಯರಾಗಿ ಜೀವಿಸುತ್ತಿರುವ ಪರಿಶಿಷ್ಟ ಸಮುದಾಯಗಳ ಪರಿಸ್ಥಿತಿ ಏನಾಗಿರಬೇಕು ಎಂಬುದನ್ನು ನಾವೆಲ್ಲರೂ ಅರ್ಥ ಮಾಡಿಕೊಳ್ಳಬೇಕು.
ಭಾರತೀಯ ಜನಗಳಾದ ನಾವು ಭ್ರಾತೃತ್ವ ಮತ್ತು ಐಕ್ಯತೆಯಿಂದ ಇರಬೇಕು ಎಂಬ ಸಂವಿಧಾನದ ಆಶಯವನ್ನು ನಾವು ಮತ್ತೆ ಮತ್ತೆ ನೆನಪು ಮಾಡಿಕೊಳ್ಳಬೇಕಾದ್ದು ಈ ಹೊತ್ತಿನ ಜರೂರು ಎಂಬುದನ್ನು ಇಳಯರಾಜಾ ಅವರ ಈ ಘಟನೆಯು ನಮಗೆ ಮತ್ತೆ ಮತ್ತೆ ನೆನಪಿಸುತ್ತದೆ ಎಂದು ಸಚಿವರು ಹೇಳಿದ್ದಾರೆ.
ADVERTISEMENT
ADVERTISEMENT