ಆದಾಯ ಮೀರಿ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿ ವಿರುದ್ಧ ವಕೀಲ್ ಜಗದೀಶ್ ಕೆಎನ್ ಮಹಾದೇವ್ ಅವರು ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ರವಿ ಡಿ ಚನ್ನಣ್ಣನವರ್ ಆದಾಯ ಮೀರಿದ ಆಸ್ತಿ ಗಳಿಕೆಯ ಆರೋಪಕ್ಕೆ ಸಂಬಂಧಿಸಿದಂತೆ ಸರ್ಕಾರ ತನಿಖೆ ನಡೆಸಲು ಹಿಂದೇಟು ಹಾಕುತ್ತಿದೆ. ಈ ಹಿನ್ನೆಲೆಯಲ್ಲಿ ಸಿಬಿಐ ತನಿಖೆ ನಡೆಸುವಂತೆ ವಕೀಲ್ ಜಗದೀಶ್ ಅವರು ತಮ್ಮ ರಿಟ್ ಅರ್ಜಿಯಲ್ಲಿ ಹೈಕೋರ್ಟ್ಗೆ ಮನವಿ ಮಾಡಿದ್ದಾರೆ.
ಐಪಿಎಸ್ ಅಧಿಕಾರಿ ರವಿ ಡಿ ಚೆನ್ನಣ್ಣನವರ್ ಆದಾಯ ಮೀರಿದ ಆಸ್ತಿ ಗಳಿಕೆ ಮಾಡಿದ್ದಾರೆ ಎಂದು ವಕೀಲ್ ಜಗದೀಶ್ ಅವರು ಸಾಮಾಜಿಕ ಜಾಲತಾಣ ಫೇಸ್ ಬುಕ್ ಮೂಲಕ ಆರೋಪ ಮಾಡುತ್ತಲೇ ಬಂದಿದ್ದರು. ತಮ್ಮ ಮೇಲಿನ ಆರೋಪದ ವಿರುದ್ಧ ಅಧಿಕಾರಿ ರವಿ ಡಿ ಚನ್ನಣ್ಣನವರ್ ವಕೀಲ ಜಗದೀಶ್ ವಿರುದ್ಧ ಮಾನನಷ್ಠ ಮೊಕದ್ದಮೆಯನ್ನು ದಾಖಲಿಸಿದ್ದಾರೆ.
ಇದುವರೆಗೂ ಸಾಮಾಜಿಕ ಜಾಲತಾಣದ ಮೂಲಕ ಐಪಿಎಸ್ ಅಧಿಕಾರಿಯ ವಿರುದ್ಧ ಆರೋಪ ಮಾಡುತ್ತಲೇ ಬಂದಿದ್ದ ವಕೀಲ ಜಗದೀಶ್ ಇದೀಗ ಕಾನೂನಾತ್ಮಕ ಹೋರಾಟಕ್ಕೆ ಇಳಿದಿದ್ದಾರೆ.