ಅಯೋಧ್ಯೆ ರಾಮ ಮಂದಿರ ಉದ್ಘಾಟನೆಯಾಗಲಿದ್ದು, ಈ ಹಿನ್ನೆಲೆ ಸಾರ್ವಜನಿಕ ವಲಯದ ಬ್ಯಾಂಕ್ಗಳು, ವಿಮಾ ಕಂಪನಿಗಳು, ಹಣಕಾಸು ಸಂಸ್ಥೆಗಳು ಮತ್ತು ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ಗಳಿಗೆ ಜನವರಿ 22 ರಂದು ಅರ್ಧ ದಿನ ರಜೆ ಇರುತ್ತದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.
ಹಣಕಾಸು ಸಚಿವಾಲಯದ ಆದೇಶದಲ್ಲಿ ಜನವರಿ 22ರಂದು ಕೇಂದ್ರ ಸರ್ಕಾರಿ ಕಚೇರಿಗಳು ಕೇಂದ್ರೀಯ ಸಂಸ್ಥೆಗಳು ಮತ್ತು ಕೇಂದ್ರ ಕೈಗಾರಿಕಾ ಸಂಸ್ಥೆಗಳ ಅರ್ಧ-ದಿನ ಅಂದರೆ ಮಧ್ಯಾಹ್ನ 2:30 ರವರೆಗೆ ಮುಚ್ಚಿರುತ್ತವೆ ಎಂದು ತಿಳಿಸಿದೆ. ಈ ಮೂಲಕ ರಾಮಲಲ್ಲಾನ ಪ್ರಾಣ ಪ್ರತಿಷ್ಠಾ ಆಚರಣೆಯಲ್ಲಿ ಉದ್ಯೋಗಿಗಳಿಗೆ ಭಾಗವಹಿಸಲು ಅವಕಾಶ ನೀಡಲಾಗಿದೆ.
ಕೇಂದ್ರೀಯ ಸಂಸ್ಥೆಗಳು ಮತ್ತು ಕೇಂದ್ರ ಕೈಗಾರಿಕಾ ಸಂಸ್ಥೆಗಳಿಗೆ ಸಂಬಂಧಿಸಿದಂತೆ DoPT ಯ (ಸಿಬ್ಬಂದಿ ಮತ್ತು ತರಬೇತಿ ಇಲಾಖೆ) ಆದೇಶವು ಎಲ್ಲಾ ಸಾರ್ವಜನಿಕ ವಲಯದ ಬ್ಯಾಂಕುಗಳು / ಸಾರ್ವಜನಿಕ ವಲಯದ ವಿಮಾ ಕಂಪನಿಗಳು / ಸಾರ್ವಜನಿಕ ವಲಯದ ಹಣಕಾಸು ಸಂಸ್ಥೆಗಳು ಮತ್ತು ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಿಗೆ ಸಹ ಅನ್ವಯಿಸುತ್ತದೆ ಎಂದು ತಿಳಿಸಿದೆ.
ಸಮಾರಂಭದಲ್ಲಿ ಭಾಗವಹಿಸಲು ದೇಶಾದ್ಯಂತ ನೌಕರರು ಒಂದು ದಿನದ ರಜೆ ಕೋರಿದ್ದರಿಂದ ಇಲಾಖೆ ಈ ನಿರ್ಧಾರ ಕೈಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.