ರಾಜ್ಯದಲ್ಲಿ ಕೋವಿಡ್ ಟೆಸ್ಟ್ ಹೆಚ್ಚಳ ಮಾಡಲಿದ್ದು, ಕೋವಿಡ್ ಲಕ್ಷಣ ಕಂಡು ಬಂದರೆ ಶೀಘ್ರವೇ ಪರೀಕ್ಷೆ ಮಾಡಲಾಗುತ್ತೆ ಅಂತ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಕೇರಳದಲ್ಲಿ ಕೋವಿಡ್ ಹೆಚ್ಚಳ ಹಿನ್ನಲೆ ಆರೋಗ್ಯ ಇಲಾಖೆಯಿಂದ ತುರ್ತು ಸಭೆ ಬಳಿಕ ವಿಕಾಸಸೌಧದಲ್ಲಿ ಮಾತನಾಡಿದ ಅವರು, ಕಳೆದೊಂದು ತಿಂಗಳಿಂದ ಸಾಂಕ್ರಾಮಿಕ ಕಾಯಿಲೆಗಳು ಹೆಚ್ಚಾಗುತ್ತಿವೆ. ಕೋವಿಡ್ ಲಕ್ಷಣ ಕಂಡು ಬಂದರೆ ಕೋವಿಡ್ ಪರೀಕ್ಷೆ ಪ್ರಮಾಣ ಹೆಚ್ಚಿಸುತ್ತೇವೆ ಎಂದಿದ್ದಾರೆ.
3 ತಿಂಗಳಿಗೆ ಬೇಕಾಗುವಷ್ಟು ಕೊವಿಡ್ ಟೆಸ್ಟ್ ಕಿಟ್ ಖರೀದಿಗೆ ಈಗಾಗಲೇ ಸೂಚನೆ ನೀಡಲಾಗಿದೆ. 1 ತಿಂಗಳ ಟೆಸ್ಟ್ ಮಾಡಲು 3 ಲಕ್ಷ RTPCR ಟೆಸ್ಟಿಂಗ್ ಕಿಟ್ ಅಗತ್ಯವಿದೆ. ಔಷಧಿ, ಬೆಡ್ ವ್ಯವಸ್ಥೆ, ಆಕ್ಸಿಜನ್ ವ್ಯವಸ್ಥೆ, ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾಕ್ ಡ್ರಿಲ್ ಮಾಡಲು ಸೂಚನೆ ನೀಡಲಾಗಿದೆ ಎಂದರು.
ಕೇರಳದಲ್ಲಿ ಕೊವಿಡ್ ಉಪ ತಳಿ ಪ್ರಕರಣ ದಿನೇದಿನೆ ಹೆಚ್ಚಳವಾಗುತ್ತಿದೆ. ಕರ್ನಾಟಕದಲ್ಲೂ 58 ಕೊರೊನಾ ಸಕ್ರಿಯ ಪ್ರಕರಣಗಳಿವೆ. ಕೊರೊನಾ ಸೋಂಕಿತ 47 ಜನ ಹೋಮ್ ಐಸೋಲೇಷನ್ನಲ್ಲಿದ್ದಾರೆ. 6 ಮಂದಿ ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಕ್ಟೋಬರ್ನಲ್ಲಿ ಕೊರೊನಾ ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದಾರೆ ಅಂತ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ರು.