ಕಾಂಗ್ರೆಸ್ ಒಳಗೊಂಡ 26 ವಿರೋಧ ಪಕ್ಷಗಳ ಮೈತ್ರಿಕೂಟ ಲೋಕಸಭಾ ಚುನಾವಣೆಗೆ ಇಂಡಿಯಾ ಮೈತ್ರಿಕೂಟವನ್ನು ರಚಿಸಿಕೊಂಡಿವೆ. ಆದಷ್ಟು ಬೇಗ ರಾಜ್ಯಗಳಲ್ಲಿ ಲೋಕಸಭಾ ಸೀಟುಗಳ ಹಂಚಿಕೆ ಸಂಬಂಧ ನಿರ್ಧಾರ ಕೈಗೊಳ್ಳುವ ಬಗ್ಗೆ ಮುಂಬೈನಲ್ಲಿ ನಡೆದ ಮೂರನೇ ಸಭೆಯಲ್ಲಿ ನಿರ್ಣಯ ಅಂಗೀಕರಿಸಿವೆ.
ಆದರೆ ಕೆಲವು ರಾಜ್ಯಗಳಲ್ಲಿ ಕಾಂಗ್ರೆಸ್ ಮತ್ತು ಮೈತ್ರಿಕೂಟದ ಪಕ್ಷಗಳ ನಡುವೆ ಲೋಕಸಭಾ ಚುನಾವಣಾ ಹೊಂದಾಣಿಕೆ ಆಗುವುದು ಕಷ್ಟ ಎನ್ನಲಾಗುತ್ತಿದೆ.
ಪ್ರಮುಖ ಇಂಗ್ಲೀಷ್ ಪತ್ರಿಕೆ ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ನ ವರದಿ ಪ್ರಕಾರ ಪ್ರಮುಖ ಮೂರು ರಾಜ್ಯಗಳಲ್ಲಿ ಇಂಡಿಯಾ ಮೈತ್ರಿಕೂಟ ಚುನಾವಣಾ ಮೈತ್ರಿ ಮಾಡಿಕೊಂಡು ಸೀಟುಗಳನ್ನು ಹಂಚಿಕೊಳ್ಳುವ ಸಾಧ್ಯತೆ ಇಲ್ಲ.
ದಕ್ಷಿಣ ರಾಜ್ಯ ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮತ್ತು ಎಡಪಕ್ಷಗಳ ಯುಡಿಎಫ್ ಪರಸ್ಪರ ಎದುರಾಳಿ. ಕಳೆದ ಬಾರಿ ಯುಡಿಎಫ್ ಅತ್ಯಧಿಕ ಸ್ಥಾನಗಳನ್ನು ಗೆದ್ದುಕೊಂಡಿತ್ತು. ಕೇರಳದಲ್ಲಿ ಎಡ ಪಕ್ಷಗಳು ಮತ್ತು ಕಾಂಗ್ರೆಸ್ ನಡುವೆ ಚುನಾವಣಾ ಮೈತ್ರಿ ಇಲ್ಲ ಎನ್ನಲಾಗುತ್ತಿದೆ.
ಪಶ್ಚಿಮ ಬಂಗಾಳ ರಾಜಕೀಯದಲ್ಲಿ ತೃಣಮೂಲ ಕಾಂಗ್ರೆಸ್ ಮತ್ತು ಎಡಪಕ್ಷ ಹಾಗೂ ಕಾಂಗ್ರೆಸ್ ಮೈತ್ರಿಕೂಟದ ಜೊತೆಗೆ ನೇರ ಸಂಘರ್ಷ ಇದೆ. ಒಂದು ವೇಳೆ ಟಿಎಂಸಿ, ಕಾಂಗ್ರೆಸ್ ಮತ್ತು ಎಡಪಕ್ಷಗಳು ಲೋಕಸಭೆಯಲ್ಲಿ ಸೀಟು ಹೊಂದಾಣಿಕೆ ಮಾಡಿಕೊಂಡರೆ ಆಗ ಬಿಜೆಪಿಗೆ ಲಾಭ ಆಗಬಹುದು ಎಂಬ ಆತಂಕ ಇದೆ. ಹೀಗಾಗಿ ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಮತ್ತು ಎಡಪಕ್ಷಗಳು ಹಾಗೂ ಕಾಂಗ್ರೆಸ್ ಮೈತ್ರಿಕೂಟ ಪ್ರತ್ಯೇಕವಾಗಿ ಸೆಣೆಸಲಿವೆ.
ಪಂಜಾಬ್ನಲ್ಲಿ ಆಡಳಿತದಲ್ಲಿರುವ ಆಮ್ ಆದ್ಮಿ ಪಕ್ಷಕ್ಕೆ ಕಾಂಗ್ರೆಸ್ ಪ್ರಮುಖ ಎದುರಾಳಿಯಾಗಿರುವ ಕಾರಣ ಇಲ್ಲೂ ಕೂಡಾ ಮೈತ್ರಿ ಅನುಮಾನ ಎಂದು ವರದಿಯಾಗಿದೆ.
ದೆಹಲಿ, ಗುಜರಾತ್, ಮಹಾರಾಷ್ಟ್ರ, ಉತ್ತರಪ್ರದೇಶ, ಬಿಹಾರ, ಜಾರ್ಖಂಡ್, ತಮಿಳುನಾಡು, ಬಿಹಾರ ಜಮ್ಮು-ಕಾಶ್ಮೀರದಲ್ಲಿ ಮೈತ್ರಿ ಬಗ್ಗೆ ಮಾತುಕತೆ ನಡೆಯಲಿದೆ ಎಂದು ವರದಿಯಾಗಿದೆ.
ADVERTISEMENT
ADVERTISEMENT