ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಕೆಎಲ್ ರಾಹುಲ್ ರನ್ನು ಕೈಬಿಟ್ಟು ಸಂಜು ಸ್ಯಾಮ್ಸನ್ ರನ್ನು ಬಿಸಿಸಿಐ ಹಿರಿಯ ಆಯ್ಕೆಗಾರರ ಕಮಿಟಿ ಆಯ್ಕೆ ಮಾಡಿದೆ.
ವೆಸ್ಟ್ ಇಂಡೀಸ್ ವಿರುದ್ಧದ ಟಿ-20 ಸರಣಿಗೆ ಈ ಮೊದಲು ಕೆಎಲ್ ರಾಹುಲ್ ಅವರನ್ನು ಆಯ್ಕೆ ಮಾಡಿತ್ತು. ಆದರೆ, ಕಳೆದ ವಾರ ಕೆಎಲ್ ರಾಹುಲ್ ಅವರಿಗೆ ಕೊರೋನಾ ಸೋಂಕು ದೃಢವಾಗಿತ್ತು. ಈ ಹಿನ್ನೆಲೆಯಲ್ಲಿ ಕೆಎಲ್ ರಾಹುಲ್ ಸ್ಥಾನಕ್ಕೆ ಸಂಜು ಸ್ಯಾಮ್ಸನ್ತನ್ನು ಆಯ್ಕೆ ಮಾಡಲಾಗಿದೆ.
ಸ್ಯಾಮ್ಸನ್, ಇತ್ತೀಚೆಗೆ ಅಂತ್ಯಗೊಂಡ 3 ಪಂದ್ಯಗಳ ಏಕದಿನ ಕ್ರಿಕೆಟ್ ಸರಣಿಯಲ್ಲಿ ಟೀಮ್ ಇಂಡಿಯಾ ಪರ ಆಡಿದ 3 ಇನಿಂಗ್ಸ್ಗಳಲ್ಲಿ 1 ಅರ್ಧಶತಕ ಬಾರಿಸಿದ್ದರು. ಇಂಗ್ಲೆಂಡ್ ಪ್ರವಾಸದ ಯಶಸ್ಸಿನ ಬಳಿಕ ವಿಂಡೀಸ್ ವಿರುದ್ಧದ ಸರಣಿಯಲ್ಲೂ ಗಮನಾರ್ಹ ಪ್ರದರ್ಶನ ನೀಡಿದ್ದ ಸಂಜು, ಕೆರಿಬಿಯನ್ನರ ನಾಡಲ್ಲಿ ಆಡಿದ ಮೂರು ಇನಿಂಗ್ಸ್ಗಳಲ್ಲಿ ಕ್ರಮವಾಗಿ 12, 54 ಮತ್ತು 6* ರನ್ ಗಳಿಸಿದ್ದರು. 2ನೇ ಒಡಿಐನಲ್ಲಿ ಅವರು ಬಾರಿಸಿದ ಜವಾಬ್ದಾರಿಯುತ ಅರ್ಧಶತಕ ಟೀಮ್ ಇಂಡಿಯಾ ಗೆಲುವಿನಲ್ಲಿ ಬಹುಮುಖ್ಯ ಪಾತ್ರ ವಹಿಸಿತ್ತು.
ಆದರೆ, ಭಾರತ ತಂಡದಲ್ಲಿ ವಿಕೆಟ್ಕೀಪರ್ ಬ್ಯಾಟ್ಸ್ಮನ್ ಸ್ಥಾನಕ್ಕಾಗಿ ರಿಷಭ್ ಪಂತ್, ಇಶಾನ್ ಕಿಶನ್ ಮತ್ತು ದಿನೇಶ್ ಕಾರ್ತಿಕ್ ಅವರಂತಹ ಆಟಗಾರರು ಮುಂಚೂಣಿಯಲ್ಲಿ ಇರುವ ಹಿನ್ನೆಲೆಯಲ್ಲಿ ಸಂಜು ಸ್ಯಾಮ್ಸನ್ಗೆ ಟಿ20 ಸರಣಿಯಲ್ಲಿ ಭಾರತ ತಂಡದಲ್ಲಿ ಕಾಣಿಸಿಕೊಂಡರೂ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಸಿಗುವುದು ಅನುಮಾನ ಎಂಬಂತ್ತಾಗಿದೆ.
ವೆಸ್ಟ್ ಇಂಡೀಸ್ ವಿರುದ್ಧ ಭಾರತ 5 ಟಿ-20 ಸರಣಿ ಇಂದು ಜುಲೈ 29 ರಿಂದ ಅಗಸ್ಟ್ 7 ರ ವರೆಗೆ ನಡೆಯಲಿವೆ. ಕೆಎಲ್ ರಾಹುಲ್ ಅನುಪಸ್ಥಿತಿಯಿಂದಾಗಿ ಸಂಜು ಸ್ಯಾಮ್ಸನ್ಗೆ ಅವಕಾಶದ ಬಾಗಿಲು ತೆರೆದಂತಾಗಿದೆ.
ಭಾರತ ತಂಡ :
ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ಸಂಜು ಸ್ಯಾಮ್ಸನ್ (ವಿಕೆಟ್ಕೀಪರ್ ಬ್ಯಾಟ್ಸ್ಮನ್), ಸೂರ್ಯಕುಮಾರ್ ಯಾದವ್, ದೀಪಕ್ ಹೂಡ, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಆರ್ ಅಶ್ವಿನ್, ರವಿ ಬಿಷ್ಣೋಯ್, ಕುಲ್ದೀಪ್ ಯಾದವ್, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.