ರೈತ ನಾಯಕ ರಾಕೇಶ್ ಟಿಕಾಯತ್ ಅವರು ಇಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸುವ ವೇಳೆ ಮಸಿ ಎರಚಲಾಗಿದೆ.
ಟಿಕಾಯತ್ ಸುದ್ದಿಗೋಷ್ಠಿ ವೇಳೆ ಏಕಾಏಕಿ ಒಳನುಗ್ಗಿದ್ದ 12 ಜನ ಮಸಿ ಎರಚಿದ್ದಾರೆ.
ರಾಕೇಶ್ ಟಿಕಾಯತ್ ಅವರು ಭಾರತೀಯ ಕಿಸಾನ್ ಯೂನಿಯನ್ನ ಅಧ್ಯಕ್ಷರಾಗಿದ್ದಾರೆ. ಮಾಧ್ಯಮವನ್ನುದ್ದೇಶಿಸಿ ಮಾತನಾಡುವಾಗ ಮಸಿ ಎರಚಲಾಗಿದೆ. ಅನಂತರ ಕಾರ್ಯಕ್ರಮದ ಕುರ್ಚಿಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು.
ಕೇಂದ್ರ ಸರ್ಕಾರದ 3 ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಿರಂತರ ಹೋರಾಟ ನಡೆಸಿ ಕೃಷಿ ಕಾಯ್ದೆಗಳನ್ನು ಸರ್ಕಾರ ವಾಪಾಸ್ ಪಡೆಯುವಲ್ಲಿ ಇವರ ಪಾತ್ರ ಮಹತ್ವದ್ದಾಗಿತ್ತು.
ಕರ್ನಾಟಕದ ರೈತ ಮುಖಂಡರೊಬ್ಬರು ಹಣ ಕೇಳುತ್ತಿದ್ದ ವೇಳೆ ಸಿಕ್ಕಿಬಿದ್ದ ಕುಟುಕು ಕಾರ್ಯಾಚರಣೆಯ ಬಗ್ಗೆ ಮಾತನಾಡಲು ಇವರು ಸುದ್ದಿಗೋಷ್ಠಿ ನಡೆಸುತ್ತಿದ್ದರು.
ಅನಂತರ ಮಾತನಾಡಿದ ರಾಕೇಶ್ ಟಿಕಾಯತ್ ಅವರು, ಸ್ಥಳೀಯ ಪೊಲೀಸರು ಯಾವುದೇ ಭದ್ರತೆ ನೀಡಿರಲಿಲ್ಲ. ಈ ಘಟನೆಯಲ್ಲಿ ರಾಜ್ಯ ಬಿಜೆಪಿ ಸರ್ಕಾರವೂ ಶಾಮೀಲಾಗಿದೆ ಎಂದು ಆರೋಪಿಸಿದ್ದಾರೆ.