ಬೇರೆ ಬೇರೆ ರಾಜ್ಯದವರು ಪರಸ್ಪರ ಸಂವಹನ ನಡೆಸುವಾಗ ಹಿಂದಿಯಲ್ಲಿ ಮಾತಾಡಬೇಕೆ ಹೊರತು ಇಂಗ್ಲೀಷ್ ನಲ್ಲಿ ಅಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ವಿರುದ್ಧವಾಗಿದ್ದು, ಮಾತೃ ಭಾಷೆಗಳಿಗೆ ಮಾಡಿರುವ ಅವಮಾನವಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯನವರು, ಅನಗತ್ಯ ಘರ್ಷಣೆಗೆ ಎಡೆಮಾಡಿಕೊಡುವ ಈ ಬೇಜವಾಬ್ದಾರಿ ಹೇಳಿಕೆಯನ್ನು ಅಮಿತ್ ಶಾ ತಕ್ಷಣವೇ ಹಿಂತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ತಮಿಳುನಾಡು, ಕೇರಳ, ಆಂಧ್ರಪ್ರದೇಶ, ಒಡಿಶಾ, ಪಶ್ಚಿಮ ಬಂಗಾಳ ಮತ್ತು ಈಶಾನ್ಯ ರಾಜ್ಯಗಳು ಸೇರಿದಂತೆ ದೇಶದ ಬಹುತೇಕ ರಾಜ್ಯಗಳು ಹಿಂದಿಯನ್ನು ಅಧಿಕೃತ ಸಂಪರ್ಕ ಭಾಷೆಯಾಗಿ ಬಳಸುವುದಿಲ್ಲ. ಅವುಗಳ ಜೊತೆಯಲ್ಲಿ ಹಿಂದಿಯಲ್ಲಿ ವ್ಯವಹರಿಸಬೇಕೆನ್ನುವುದು ಸಾಂಸ್ಕೃತಿಕ ಭಯೋತ್ಪಾದನೆಯಾಗಿದೆ.
ತಮಿಳುನಾಡು, ಕೇರಳ, ಆಂಧ್ರಪ್ರದೇಶ, ಒಡಿಸ್ಸಾ, ಪಶ್ಚಿಮ ಬಂಗಾಳ ಮತ್ತು ಈಶಾನ್ಯ ರಾಜ್ಯಗಳು ಸೇರಿದಂತೆ ದೇಶದ ಬಹುತೇಕ ರಾಜ್ಯಗಳು ಹಿಂದಿಯನ್ನು ಅಧಿಕೃತ ಸಂಪರ್ಕಭಾಷೆಯಾಗಿ ಬಳಸುವುದಿಲ್ಲ. ಅವುಗಳ ಜೊತೆಯಲ್ಲಿ ಹಿಂದಿಯಲ್ಲಿ ವ್ಯವಹರಿಸಬೇಕೆನ್ನುವುದು ಸಾಂಸ್ಕೃತಿಕ ಭಯೋತ್ಪಾದನೆಯಾಗಿದೆ.
7/8#IndiaAgainstHindiImposition— Siddaramaiah (@siddaramaiah) April 8, 2022
ಅಮಿತ್ ಶಾ ಅವರ ತವರು ಗುಜರಾತ್ ರಾಜ್ಯದ ಮಣ್ಣಿನ ಮಗನಾದ ಮಹಾತ್ಮ ಗಾಂಧೀಜಿ ಬಹು ಸಂಸ್ಕೃತಿ, ಬಹುಭಾಷೆಗಳ ಪ್ರತಿಪಾದಕರಾಗಿದ್ದರು. ಆದರೆ, ಅಮಿತ್ ಶಾ ಅವರಿಗೆ ಗಾಂಧೀಜಿಯವರಿಗಿಂತ ಏಕ ಸಂಸ್ಕೃತಿ, ಏಕ ಭಾಷೆಯ ಪ್ರತಿಪಾದಕಾರಾದ ಸೂಡೊ ರಾಷ್ಟ್ರೀಯವಾದಿ ಸಾರ್ವಕರ್ ಪ್ರಿಯರಾಗಿರುವುದು ದುರಂತ. ಅಮಿತ್ ಶಾ ಅವರ ಮಾತೃಭಾಷೆ ಗುಜರಾತಿ. ಆದರೆ, ತಮ್ಮ ಮಾತೃಭಾಷೆಯನ್ನು ಕಡೆಗಣಿಸಿ ಹಿಂದಿ ಭಾಷೆಯ ಗುಲಾಮಗಿರಿ ಮಾಡುತ್ತಿರುವುದು ವಿಷಾದನೀಯ ಎಂದು ಸಿದ್ದರಾಮಯ್ಯ ಅಮಿತ್ ಷಾ ವಿರುದ್ಧ ಕಿಡಿಕಾರಿದ್ದಾರೆ.