ADVERTISEMENT
ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸರಣ್ ಸಿಂಗ್ಗೆ ದೆಹಲಿ ನ್ಯಾಯಾಲಯ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಭಾರತ ಕುಸ್ತಿ ಒಕ್ಕೂಟದ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಮತ್ತು ಪ್ರಕರಣದ ಸಹ ಆರೋಪಿ ವಿನೋದ್ ಗೋಮರ್ಗೂ ಮಧ್ಯಂತರ ಜಾಮೀನು ನೀಡಿದೆ.
ಗುರುವಾರ ರೆಗ್ಯೂಲರ್ ಜಾಮೀನಿನ ಬಗ್ಗೆ ಅರ್ಜಿ ವಿಚಾರಣೆ ನಡೆಯಲಿದ್ದು, ಅಲ್ಲಿವರೆಗೂ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಬಂಧನದಿಂದ ರಕ್ಷಣೆ ನೀಡಿದೆ.
ನಾನು ಆರೋಪಿಯನ್ನು ಬಂಧಿಸಿಲ್ಲ. ನಾವು ಅದನ್ನು ನ್ಯಾಯಾಲಯದ ವಿವೇಚನೆಗೆ ಬಿಡ್ತೇವೆ. ಆದರೆ ಸಾಕ್ಷಿಗಳ ಪ್ರಭಾವ ಬೀರಬಾರದು ಎಂದು ಷರತ್ತಿನೊಂದಿಗೆ ಜಾಮೀನು ನೀಡುವುದನ್ನು ವಿರೋಧಿಸ್ತೇವೆ ಎಂದು ದೆಹಲಿ ಪೊಲೀಸರ ಪರ ವಕೀಲರು ವಾದಿಸಿದರು.
2016ರಿಂದ 2019ರವರೆಗೆ ಕುಸ್ತಿ ಒಕ್ಕೂಟದ ಅಧ್ಯಕ್ಷನಾಗಿದ್ದ ವೇಳೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದಡಿ ಬ್ರಿಜ್ ಭೂಷಣ್ ವಿರುದ್ಧ ಪೋಕ್ಸೋ ಸೇರಿದಂತೆ ವಿವಿಧ ಪ್ರಕರಣ ದಾಖಲಿಸಿ ಕಳೆದ ತಿಂಗಳು ದೆಹಲಿ ಕೋರ್ಟ್ಗೆ ಆರೋಪಪಟ್ಟಿಯನ್ನೂ ಸಲ್ಲಿಸಿದ್ದರು.
ADVERTISEMENT