ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್ ಅವರಿಗೆ ರಾಜ್ಯ ಸರ್ಕಾರ ಆಘಾತ ನೀಡಿದೆ. ವಾಲ್ಮೀಕಿ ನಿಗಮಕ್ಕೆ M D ಆಗಿ ನೇಮಿಸಿ ಹೊರಡಿಸಿದ್ದ ಆದೇಶವನ್ನು ತಡೆಹಿಡಿದಿದೆ.
ಸಿಐಡಿ ಎಸ್ಪಿ ಆಗಿದ್ದ ಚನ್ನಣ್ಣನವರ್ ಅವರನ್ನು ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಜಾತಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಸರ್ಕಾರ ಗುರುವಾರವಷ್ಟೇ ವರ್ಗಾವಣೆ ಮಾಡಿತ್ತು.
ಆದರೆ ಐಪಿಎಸ್ ಅಧಿಕಾರಿಯನ್ನು ಈ ಹುದ್ದೆಗೆ ನೇಮಕ ಮಾಡಿದ್ದು ತೀವ್ರ ಟೀಕೆಗೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಚನ್ನಣ್ಣನವರ್ ನೇಮಕಾತಿಗೆ ರಾಜ್ಯ ಸರ್ಕಾರ ತಡೆಹಾಕಿದೆ.
ಸದ್ಯಕ್ಕೆ ರವಿ ಡಿ ಚನ್ನಣ್ಣನವರ್ ಗೆ ಸರ್ಕಾರ ಯಾವುದೇ ಹುದ್ದೆ ತೋರಿಸಿಲ್ಲ.