ಐರ್ಲೆಂಡ್ ವಿರುದ್ಧ ಭಾರತ ಟಿ-20 ತಂಡವನ್ನು ಬಿಸಿಸಿಐ ಪ್ರಕಟ ಮಾಡಿದೆ.
ಭಾರತ ತಂಡ ಇದೇ ಜೂನ್ 26 ಮತ್ತು 28 ರಂದು ಐರ್ಲೆಂಡ್ ವಿರುದ್ಧ 2 ಟಿ-20 ಪಂದ್ಯಗಳನ್ನು ಆಡಲಿದೆ.
ಐರ್ಲಂಡ್ ಸರಣಿಗೆ ದಕ್ಷಿಣ ಆಫ್ರಿಕಾ ಸರಣಿಯ ಟಿ-20 ನಾಯಕನಾಗಿರುವ ರಿಷಬ್ ಪಂತ್ಗೆ ಬಿಸಿಸಿಐ ಆಯ್ಕೆ ಸಮಿತಿ ಗೇಟ್ ಪಾಸ್ ನೀಡಿದೆ. ಹಾರ್ದಿಕ್ ಪಾಂಡ್ಯಗೆ ನಾಯಕ ಸ್ಥಾನಕ್ಕೆ ಬಡ್ತಿ ನೀಡಿದೆ. ಬೌಲರ್ ಭುವನೇಶ್ವರ್ ಕುಮಾರ್ ಉಪನಾಯಕ ಸ್ಥಾನಕ್ಕೆ ಬಡ್ತಿ ಪಡೆದಿದ್ದಾರೆ.
ಗಾಯದ ಸಮಸ್ಯೆಯಿಂದ ಗುಣಮುಖರಾಗಿರುವ ಸೂರ್ಯಕುಮಾರ್ ಯಾದವ್, ರಾಹುಲ್ ತ್ರಿಪಾಠಿ, ಸಂಜು ಸ್ಯಾಮ್ಸನ್, ಹರ್ಷದೀಪ್ ಸಿಂಗ್ ಮತ್ತು ಉಮ್ರಾನ್ ಮಲೀಕ್ ತಂಡಕ್ಕೆ ಮರಳಿದ್ದಾರೆ.
ಇಂಗ್ಲೆಂಡ್ ವಿರುದ್ಧ ಜುಲೈ 1 ರಂದು ಆರಂಭವಾಗಲಿರುವ ಟೆಸ್ಟ್ ಸರಣಿಯ ಭಾಗವಾಗಿರುವ ರೋಹಿತ್ ಶರ್ಮಾ, ಕೆಎಲ್ ರಾಹುಲ್, ರವೀಂದ್ರ ಜಡೇಜ, ರಿಷಬ್ ಪಂತ್,ಮಹಮ್ಮದ್ ಶಮಿ ಮತ್ತು ಶ್ರೇಯಶ್ ಅಯ್ಯರ್ ಈ ಟಿ-20 ತಂಡದ ಭಾಗವಾಗಿಲ್ಲ.
ಆಯ್ಕೆಯಾದ ಟಿ-20 ತಂಡ
ಹಾರ್ದಿಕ್ ಪಾಂಡ್ಯ ( ನಾಯಕ), ಭುವನೇಶ್ವರ್ ಕುಮಾರ್ ( ಉಪನಾಯಕ ), ಇಶಾನ್ ಕಿಶಾನ್, ರುತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ವೆಂಕಟೇಶ್ ಅಯ್ಯರ್, ದೀಪಕ್ ಹುಡಾ, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್ ( ವಿಕೇಟ್ ಕೀಪರ್ ), ಯಜುವೇಂದ್ರ ಚಾಹಲ್, ಅಕ್ಷರ್ ಪಟೇಲ್, ಆರ್ ಬಿಷ್ಣೋಯಿ, ಹರ್ಷಲ್ ಪಟೇಲ್, ಆವೇಶ್ ಖಾನ್, ಹರ್ಷದೀಪ್ ಸಿಮಗ್, ಉಮ್ರಾನ್ ಮಲೀಕ್