ಚಾಮರಾಜಪೇಟೆಯ ಶಾಸಕ ಜಮೀರ್ ಅಹ್ಮದ್ ಖಾನ್ (Zameer Ahmad Khan) ಇಂದು ತಮ್ಮ ಕಚೇರಿಯಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿದ್ದಾರೆ. ಇವರ ಜೊತೆ ಪುತ್ರ ಹಾಗೂ ನಟ ಝೈದ್ ಖಾನ್ ಸಾಥ್ ನೀಡಿದ್ದಾರೆ.
ಚಾಮರಾಜ ಪೇಟೆಯಲ್ಲಿರುವ ತಮ್ಮ ಶಾಸಕರ ಕಚೇರಿಯಲ್ಲಿ ಶಾಸಕ ಜಮೀರ್ ಅಹ್ಮದ್ ಖಾನ್ (Zameer Ahmad Khan) ಗಣೇಶನನ್ನು ಕೂರಿಸಿದ್ದಾರೆ. ಪುತ್ರ ಝೈದ್ ಖಾನ್ ಹಾಗೂ ಜಮೀರ್ ಅಹ್ಮದ್ ಗಣೇಶನ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಶಾಸಕರ ಕಚೇರಿಯಲ್ಲಿ ಗಣೇಶೋತ್ಸವ ಭರ್ಜರಿಯಾಗಿ ನಡೆದಿದ್ದು, ಸ್ಥಳೀಯರೂ ಈ ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ.