ಸುದೀರ್ಘ ಅವಧಿಗಳ ಕಾಲ ಪಕ್ಷದಲ್ಲಿದ್ದು, ಹಲವಾರು ಹುದ್ದೆಗಳನ್ನು ನಿಭಾಯಿಸಿದ್ದ ಕಾಂಗ್ರೆಸ್ ನಾಯಕ ಗುಲಾಂ ನಬಿ ಅಜಾದ್ ಕೆಲ ದಿನಗಳ ಹಿಂದೆಯಷ್ಟೇ ಕಾಂಗ್ರೆಸ್ಗೆ ಗುಡ್ ಬೈ ಹೇಳಿ ಅಘಾತ ನೀಡಿದ್ದರು. ಅದರೆ ಜೊತೆ ಇದೀಗ ಜಮ್ಮು ಕಾಶ್ಮೀರದಲ್ಲಿ (Jammu And Kashmir) ಕಾಂಗ್ರೆಸ್ಗೆ ಮತ್ತೊಂದು ಅಘಾತವಾಗಿದೆ.
ಗುಲಾಂ ನಬಿ ಅಜಾದ್ ಬೆನ್ನಲ್ಲೇ ಜಮ್ಮು-ಕಾಶ್ಮೀರದಲ್ಲಿ (Jammu And Kashmir) ಅವರ ಬೆಂಬಲಿಗರು ರಾಜೀನಾಮೆ ನೀಡಿದ್ದು, ಇಂದು ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರಿಗೆ 51 ಮಂದಿ ಸಾಮೂಹಿಕ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಈವರೆಗೂ 64 ಮಂದಿ ರಾಜೀನಾಮೆ ನೀಡಿದ್ದು, ಗುಲಾಂ ನಬಿ ಅಜಾದ್ ಅವರ ಹೊಸ ಪಕ್ಷವನ್ನು ಸೇರ್ಪಡೆಯಾಗಲಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ : ಕಾಂಗ್ರೆಸ್ಗೆ ಗುಲಾಂ ನಬಿ ಅಜಾದ್ ಗುಡ್ ಬೈ
ಕಾಶ್ಮೀರದ ಮಾಜಿ ಉಪಮುಖ್ಯಮಂತ್ರಿ ತಾರಾ ಚಂದ್, ಮಾಜಿ ಸಚಿವರಾದ ಅಬ್ದುಲ್ ಮಜಿದ್ ವಾನಿ, ಮನೋಹರ್ ಲಾಲ್ ಶರ್ಮಾ, ಘರು ರಾಮ್ ಮತ್ತು ಮಾಜಿ ಶಾಸಕ ಬಲ್ವಾನ್ ಸಿಂಗ್ ಸೇರಿದಂತೆ ಹಲವರು ತಮ್ಮ ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ತಮ್ಮ ಎಲ್ಲ ಜವಾಬ್ದಾರಿಗಳಿಗೆ ರಾಜೀನಾಮೆ ನೀಡುವುದಾಗಿ ಪತ್ರಿಕಾಗೋಷ್ಠಿಯಲ್ಲಿ ಘೋಷಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಗುಲಾಂ ನಬಿ ಆಜಾದ್ ಕಳೆದ ಶುಕ್ರವಾರ ಕಾಂಗ್ರೆಸ್ ಜೊತೆಗಿನ ಐದು ದಶಕಗಳ ಒಡನಾಟವನ್ನು ಕೊನೆಗೊಳಿಸಿದರು. ಅಸಮರ್ಥ ನಾಯಕರು ಪಕ್ಷವನ್ನು ಸಮಗ್ರವಾಗಿ ನಾಶಪಡಿಸುತ್ತಿದ್ದಾರೆ ಎಂದು ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದರು. ಅವರು ಶೀಘ್ರದಲ್ಲೇ ಜಮ್ಮು ಮತ್ತು ಕಾಶ್ಮೀರದಿಂದ ರಾಷ್ಟ್ರೀಯ ಮಟ್ಟದ ಪಕ್ಷವನ್ನು ಪ್ರಾರಂಭಿಸಲಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ : ಗುಲಾಂ ನಬಿ ಅಜಾದ್ರ ಸೋದರಳಿಯ ಬಿಜೆಪಿಗೆ ಸೇರ್ಪಡೆ : ಬಿಜೆಪಿಗೆ ದೊಡ್ಡ ತಿರುವು ಎಂದ ರಾಜ್ಯಾಧ್ಯಕ್ಷ
https://www.youtube.com/watch?v=8THpdsYjVTQ