ಜಪಾನ್ ದೇಶದ ಮಾಜಿ ಪ್ರಧಾನಿ ಶಿಂಜೋ ಅಬೆ ಗುಂಡಿನ ದಾಳಿಗೆ ಒಳಗಾಗಿ ಸಾವನ್ನಪ್ಪಿದ್ದಾರೆ. ಹಿಂಬದಿಯಿಂದ ಬಂದ ದುಷ್ಕರ್ಮಿಯೊಬ್ಬ ಶಿಂಜೊ ಅಬೆ ಎದೆಗೆ ಶೂಟ್ ಮಾಡಿದ್ದಾನೆ ಎಂದು ಇಂದು ಬೆಳಿಗ್ಗೆಯಷ್ಟೆ ವರದಿ ಆಗಿತ್ತು.
ಶಿಂಜೋ ಅಬೆ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದಾಗ್ಯೂ, ಚಿಕಿತ್ಸೆಗೆ ಸ್ಪಂದಿಸದೆ ಅವರು ಸಾವನ್ನಪ್ಪಿದ್ದಾರೆ.
ಅಬೆ ಭಾಷಣ ಮಾಡುತ್ತಿದ್ದ ವೇಳೆ ಈ ದಾಳಿ ನಡೆದಿದೆ. ಶೂಟೌಟ್ ಬೆನ್ನಲ್ಲೇ ಅಬೆ ಅಲ್ಲೇ ಕುಸಿದು ರಕ್ತದ ಮಡುವಿನಲ್ಲಿ ಬಿದ್ದಿದ್ದರು.
ಶಾಟ್ಗನ್ನಿಂದ ದಾಳಿ ನಡೆಸಿದ ದುಷ್ಕರ್ಮಿಯನ್ನು ವಶಕ್ಕೆ ಪಡೆಯಲಾಗಿದೆ.
2020ರಲ್ಲಿ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಶಿಂಜೋ ಅಬೆ ಜಪಾನ್ ಅತ್ಯಂತ ದೀರ್ಘಕಾಲದ ಪ್ರಧಾನಿ ಎಂಬ ಹೆಗ್ಗಳಿಕೆ ಪಡೆದಿದ್ದಾರೆ.