ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ಅವರಿಗೆ ಜೆಡಿಎಸ್ ಬೆಂಬಲ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಕಾಂಗ್ರೆಸ್‌ಗೆ ಬೆಂಬಲ ನೀಡುವ ಬಗ್ಗೆ ಜೆಡಿಎಸ್ ವಲಯದಲ್ಲಿ ಚರ್ಚೆ ನಡೆಯುತ್ತಿದೆ ಎಂದು ಪ್ರತಿಕ್ಷಣನ್ಯೂಸ್‌ಗೆ ಮೂಲಗಳು ತಿಳಿಸಿವೆ.
ಇವತ್ತು ವಿದೇಶದಿಂದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ. ಆ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಜೂನ್ 10ರಂದು ಮತದಾನ ನಡೆಯಲಿದೆ.
ನಾಮಪತ್ರ ಹಿಂಪಡೆಯಲು ಇವತ್ತೇ ಕಡೆಯ ದಿನ ಆಗಿತ್ತು. ಆದ್ರೆ ಹೆಚ್ಚುವರಿ ಅಭ್ಯರ್ಥಿಗಳಾಗಿ ಕಣಕ್ಕಿಳಿದಿರುವ ಕಾಂಗ್ರೆಸ್ ಮನ್ಸೂರ್ ಅಲಿ ಖಾನ್ ಆಗಲೀ, ಬಿಜೆಪಿಯ ಲೆಹರ್ ಸಿಂಗ್ ಆಗಲೀ ನಾಮಪತ್ರ ವಾಪಸ್ ಪಡೆದಿಲ್ಲ.
ಯಾರೂ ನಾಮಪತ್ರ ವಾಪಸ್ ಪಡೆಯದೇ ಇರುವ ಹಿನ್ನೆಲೆಯಲ್ಲಿ ಬಹುಮತ ಇಲ್ಲದ ಜೆಡಿಎಸ್ ಈಗ ಅಡಕತ್ತರಿಯಲ್ಲಿ ಸಿಲುಕಿದೆ.
32 ಶಾಸಕರ ಬೆಂಬಲವನ್ನಷ್ಟೇ ಹೊಂದಿರುವ ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಅವರಿಗೆ ಕಾಂಗ್ರೆಸ್ ಅಥವಾ ಬಿಜೆಪಿ ಬೆಂಬಲವಿಲ್ಲದೇ ಗೆಲ್ಲಲು ಸಾಧ್ಯವಿಲ್ಲ.
ಬಿಜೆಪಿಯ ಎರಡನೇ ಪ್ರಾಶಸ್ತö್ಯದ ಮತಗಳೂ ಅದರದ್ದೇ ಅಭ್ಯರ್ಥಿ ಲೆಹರ್ ಸಿಂಗ್ ಅವರಿಗೆ ಬೀಳಲಿದೆ.
ಒಂದು ವೇಳೆ ಬಿಜೆಪಿಯ ಮೂರನೇ ಅಭ್ಯರ್ಥಿ ಲೆಹರ್ ಸಿಂಗ್ ಗೆದ್ದು ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿಯೂ ಸೋತು ಕಾಂಗ್ರೆಸ್‌ನ ಮನ್ಸೂರ್ ಅಲಿ ಖಾನ್ ಸೋತರೇ ಆಗ ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಯನ್ನು ಸೋಲಿಸಿದ ಕಳಂಕದ ಮತ್ತು ಬಿಜೆಪಿ ಬಿ ಟೀಂ ಎಂದ ಹಣೆಪಟ್ಟಿನ್ನು 2023ರ ವಿಧಾನಸಭಾ ಚುನಾವಣೆಯವರೆಗೂ ಅಂಟಿಸಿಕೊAಡು ತಿರುಗಾಡಬೇಕಾಗುತ್ತದೆ ಎಂದು ಆತಂಕ ಜೆಡಿಎಸ್ ನಾಯಕರದ್ದು.
ಹೀಗಾಗಿ ಕಾಂಗ್ರೆಸ್‌ನ ಎರಡನೇ ಅಭ್ಯರ್ಥಿ ಮನ್ಸೂರ್ ಅಲಿ ಖಾನ್‌ಗೆ ಜೆಡಿಎಸ್ ಬೆಂಬಲ ನೀಡಿದರೆ ಒಳ್ಳೆದು, ಇದರಿಂದ ವಿಧಾನಸಭಾ ಚುನಾವಣೆಯಲ್ಲಿ ಅಲ್ಪಸಂಖ್ಯಾತ ಮತಗಳನ್ನು ಸೆಳೆಯುವುದಕ್ಕೆ ಸಹಕಾರಿ ಆಗುತ್ತದೆ ಎಂಬ ಲೆಕ್ಕಾಚಾರ ಜೆಡಿಎಸ್‌ನಲ್ಲಿ ಶುರುವಾಗಿದೆ ಎಂದು ಪ್ರತಿಕ್ಷಣ ನ್ಯೂಸ್‌ಗೆ ಮೂಲಗಳು ತಿಳಿಸಿವೆ.