ADVERTISEMENT
ಸಾಲ ಮನ್ನಾಕ್ಕಾಗಿ ರೈತರು ಮತ್ತೆ ಮತ್ತೆ ಬರಗಾಲವನ್ನು ಬಯಸುತ್ತಿದ್ದಾರೆ ಎಂದು ಬೆಳಗಾವಿಯಲ್ಲಿ ಸಕ್ಕರೆ ಸಚಿವ ಶಿವಾನಂದ್ ಪಾಟೀಲ್ ನೀಡಿರುವ ಹೇಳಿಕೆಯನ್ನು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಖಂಡಿಸಿದ್ದಾರೆ.
ಸಚಿವ ಶ್ರೀ ಶಿವಾನಂದ ಪಾಟೀಲ ಅವರು ರೈತರ ಬಗ್ಗೆ ನೀಡಿರುವ ಹೇಳಿಕೆ ಖಂಡನೀಯ. ಅನ್ನದಾತನ ಕಷ್ಟ, ಸಂಕಷ್ಟಗಳ ಬಗ್ಗೆ ಅವಹೇಳನ ಮಾಡುವುದು ಖಂಡಿತಾ ಸರಿಯಲ್ಲ. ಸಚಿವರು ಇಂಥ ವಿಷಯಗಳ ಬಗ್ಗೆ ಬಹಳ ಎಚ್ಚರಿಕೆ, ಸೂಕ್ಷ್ಮತೆ, ಸಂಯಮದಿಂದ ಮಾತನಾಡಬೇಕು.
ನಾನು ಕೃಷಿಸಾಲ ಮನ್ನಾ ಮಾಡುವ ಮುನ್ನ ರಾಜ್ಯದಲ್ಲಿ ನಡೆದ ರೈತರ ಸರಣಿ ಆತ್ಮಹತ್ಯಾಕಾಂಡ ನೆನಪು ಮಾಡಿಕೊಂಡರೆ ಈಗಲೂ ನನ್ನ ಮೈ ನಡುಗುತ್ತದೆ. ರೈತ ಕೇಳುತ್ತಿರುವುದು ತನ್ನ ಹಕ್ಕನ್ನಷ್ಟೇ, ಭಿಕ್ಷೆಯನ್ನಲ್ಲ. ಸಚಿವರು ಬೇಷರತ್ ಕ್ಷಮೆ ಕೇಳಬೇಕು, ತಮ್ಮ ಹೇಳಿಕೆಯನ್ನು ಕೂಡಲೇ ವಾಪಸ್ ಪಡೆಯಬೇಕು
ಎಂದು ಜೆಡಿಎಸ್ ಹಂಗಾಮಿ ರಾಜ್ಯಾಧ್ಯಕ್ಷರೂ ಆಗಿರುವ ಹೆಚ್ಡಿಕೆ ಆಗ್ರಹಿಸಿದ್ದಾರೆ.
ADVERTISEMENT