ADVERTISEMENT
ಬಿಹಾರದಲ್ಲಿ ಬಿಜೆಪಿ ಮತ್ತು ಜೆಡಿಯು ನಡುವಿನ ಮೈತ್ರಿ ಕೊನೆ ಆಗುವ ಸಾಧ್ಯತೆ ಇದೆ. ಮಿತ್ರ ಪಕ್ಷ ಬಿಜೆಪಿ ಬಗ್ಗೆ ಅಸಮಾಧಾನಗೊಂಡಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನಾಳೆ ಜೆಡಿಯು ಶಾಸಕರ ಸಭೆ ಕರೆದಿದ್ದಾರೆ.
ಪ್ರಧಾನಿ ಮೋದಿ ಸಂಪುಟದಲ್ಲಿ ಸಚಿವರಾಗಿದ್ದ ತನ್ನದೇ ಪಕ್ಷದ ಆರ್ಸಿಪಿ ಸಿಂಗ್ಗೆ ಈ ಬಾರಿ ಜೆಡಿಯು ರಾಜ್ಯಸಭಾ ಚುನಾವಣೆಯಲ್ಲಿ ಟಿಕೆಟ್ ನಿರಾಕರಿಸಿತ್ತು.
ವಿಧಾನಸಭಾ ಸ್ಪೀಕರ್ ಆಗಿರುವ ವಿಜಯ್ ಕುಮಾರ್ ಸಿಂಗ್ ಅವರು ನಿತೀಶ್ ಕುಮಾರ್ ವಿರೋಧಿ ಆಗಿದ್ದು, ಅವರನ್ನು ಸ್ಪೀಕರ್ ಹುದ್ದೆಯಿಂದ ತೆಗೆಯಬೇಕೆಂದು ನಿತೀಶ್ ಕುಮಾರ್ ಒತ್ತಾಯಿಸುತ್ತಿದ್ದಾರೆ. ಆದರೆ ಆ ಬೇಡಿಕೆಯನ್ನು ಬಿಜೆಪಿ ಈಡೇರಿಸಿಲ್ಲ.
ದೆಹಲಿಯಲ್ಲಿ ನಡೆದ ನೀತಿ ಆಯೋಗದ ಸಭೆಗೂ ನಿತೀಶ್ ಕುಮಾರ್ ಗೈರಾಗಿದ್ದಾರೆ.
ADVERTISEMENT