ADVERTISEMENT
ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ ನಿಗಮ ಮತ್ತು ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ವತಿಯಿಂದ ಜೂನ್ 15ರಂದು ಗುರುವಾರ ಬೆಂಗಳೂರಲ್ಲಿ ಉದ್ಯೋಗ ಮೇಳ ನಡೆಯಲಿದೆ.
ಡೈರಿ ಸರ್ಕಲ್ನಲ್ಲಿರುವ ಕೌಶಲ್ಯಾಭಿವೃದ್ಧಿ ನಿಗಮ ಬೆಳಗ್ಗೆ 9.30ರಿಂದ ಉದ್ಯೋಗ ಮೇಳ ನಡೆಯಲಿದೆ.
ಎಸ್ಎಸ್ಎಲ್ಸಿ, ಪಿಯುಸಿ, ಡಿಪ್ಲೋಮಾದಲ್ಲಿ ಪಾಸ್ ಅಥವಾ ಫೇಲ್ ಆಗಿರುವ ಉದ್ಯೋಗಾಂಕ್ಷಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.
ಯಾವೆಲ್ಲ ಕೆಲಸಕ್ಕೆ ನೇಮಕಾತಿ:
ಸ್ಟೀವರ್ಡ್, ಕ್ಯಾಪ್ಟನ್, ಅಡುಗೆ ಸಹಾಯಕ, ಮಾಣಿ, ಮೇಲ್ವಿಚಾರಕ, ಬಾಣಸಿಗ ಕೆಲಸಕ್ಕೆ ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಉದ್ಯೋಗಾಸಕ್ತರನ್ನು ಆಯ್ಕೆ ಮಾಡಿಕೊಳ್ಳಲಿದೆ.
ಆಯ್ಕೆ ಆದವರಿಗೆ ಉಚಿತ ವಸತಿ ಮತ್ತು ಊಟ ಸೌಲಭ್ಯ ಇರಲಿದೆ. ಇಎಸ್ಐ ಮತ್ತು ಪಿಎಫ್ ಸೌಲಭ್ಯಗೂ ಸಿಗಲಿದೆ. ಮಾಸಿಕ 13 ಸಾವಿರದಿಂದ 16 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ADVERTISEMENT