ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರು ಸೋಮವಾರ ರಾಜ್ಯಕ್ಕೆ ಆಗಮಿಸಲಿದ್ದಾರೆ. ಲೋಕಸಭಾ ಚುನಾವಣೆಯ ಸಿದ್ದತೆಯ ಹಿನ್ನೆಲಯಲ್ಲಿ ಪಕ್ಷದ ಪ್ರಮುಖರೊಂದಿಗೆ ಚರ್ಚೆ ನಡೆಸಲಿರುವ ಜೆಪಿ ನಡ್ಡಾ, ಮಂಗಳವಾರ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಇಂದು ರಾತ್ರಿ ಬೆಳಗಾವಿಗೆ ಆಗಮಿಸುವ ಜೆಪಿ ನಡ್ಡಾ ರಾತ್ರಿ ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಖಾಸಗಿ ಹೋಟೆಲ್ನಲ್ಲಿ ಅವರಿಗೆ ವಾಸ್ತವ್ಯ ಕಲ್ಪಿಸಲಾಗಿದೆ. ಮಂಗಳವಾರ ಬೆಳಗ್ಗೆ 11.15 ಗಂಟೆಗೆ ಚಿಕ್ಕೋಡಿಯಲ್ಲಿ ಬೂತ್ ಸಮಾವೇಶದಲ್ಲಿ ಭಾಗವಹಿಸಲಿದ್ದು, ಸಂಜೆ 5ಕ್ಕೆ ಅವರು ಡಾ.ಎಚ್.ಬಿ.ರಾಜಶೇಖರ ಸಭಾಂಗಣದಲ್ಲಿ ಪ್ರಬುದ್ಧರ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಜೆ.ಪಿ.ನಡ್ಡಾ ಅವರ ಈ ಕಾರ್ಯಕ್ರಮಗಳಲ್ಲಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರೂ ಪಾಲ್ಗೊಳ್ಳಲಿದ್ದಾರೆ.