ನ್ಯಾಯಾಂಗ ನಿಂದನೆಯ ಆರೋಪದಲ್ಲಿ ಆಂದ್ರಪ್ರದೇಶದ ವಿಶೇಷ ಮುಖ್ಯ ಕಾರ್ಯದರ್ಶಿ ಹಾಗೂ ಮೂವರ ಹಿರಿಯ ಐಎಎಸ್ ಅಧಿಕಾರಿಗಳಿಗೆ 1 ತಿಂಗಳು ಜೈಲು ಶಿಕ್ಷೆ ಹಾಗೂ ತಲಾ 2 ಸಾವಿರ ದಂಡ ವಿಧಿಸಿ ಆಂಧ್ರಪ್ರದೇಶದ ಹೈಕೋರ್ಟ್ ಆದೇಶ ಹೊರಡಿಸಿದೆ.
ನ್ಯಾಯಾಲಯ ಹೊರಡಿಸಿದ ಆದೇಶವನ್ನು ನಿಗದಿಪಡಿಸಿದ ಸಮಯದಲ್ಲಿ ಜಾರಿಗೊಳಿಸಲು ವಿಫಲರಾದ ಹಿನ್ನೆಲೆಯಲ್ಲಿ ಈ ಶಿಕ್ಷೆ ವಿಧಿಸಿರುವುದಾಗಿ ನ್ಯಾಯಾಧೀಶರಾದ ಬಿ.ದೇವಾನಂದ ತಮ್ಮ ತೀರ್ಪಿನಲ್ಲಿ ಹೇಳಿದ್ದಾರೆ.
2019 ರ ಅಕ್ಟೋಬರ್ನಲ್ಲಿ ಗ್ರಾಮ ಕೃಷಿ ಸಹಾಯಕರ ಹುದ್ದೆಗೆ ಅರ್ಜಿದಾರರ ಅಭ್ಯರ್ಥಿತನವನ್ನು ಪರಿಗಣಿಸುವಂತೆ ಸರ್ಕಾರಿ ಅಧಿಕಾರಿಗಳಿಗೆ ನ್ಯಾಯಾಲಯ ಸೂಚನೆ ನೀಡಿತ್ತು. ಹೈಕೋರ್ಟ್ ಆದೇಶವನ್ನು ಜಾರಿಮಾಡುವಲ್ಲಿ ಅಧಿಕಾರಿಗಳು ವಿಫಲರಾದ ಹಿನ್ನೆಲೆಯಲ್ಲಿ ಅಭ್ಯರ್ಥಿ 2020 ರಲ್ಲಿ ನ್ಯಾಯಾಂಗ ನಿಂದನೆ ದಾವೆ ಹೂಡಿದ್ದರು. ಈ ದಾವೆ ಕೋರ್ಟ್ಗೆ ಸಲ್ಲಿಕೆಯಾದ ನಂತರ ಅಭ್ಯರ್ಥಿಯ ಅಭ್ಯರ್ಥಿತನವನ್ನು ಅಧಿಕಾರಿಗಳು ರದ್ದು ಮಾಡಿದ್ದರು.
ಇದನ್ನು ನ್ಯಾಯಾಂಗ ನಿಂದನೆ ಎಂದು ಪರಿಗಣಿಸಿರುವ ನ್ಯಾಯಾಲಯ ಕೃಷಿ ಇಲಾಖೆಯ ವಿಶೇಷ ಮುಖ್ಯ ಕಾರ್ಯದರ್ಶಿ ಪೂನಮ್ ಮಲಕೊಂಡಯ್ಯ, ಕೃಷಿ ಇಲಾಖೆಯ ಹಿಂದಿನ ಆಯುಕ್ತ ಎಚ್ ಅರುಣ್ ಕುಮಾರ್ ಮತ್ತು ಹಿಂದಿನ ಕರ್ನೂಲ್ ಜಿಲ್ಲಾಧಿಕಾರಿ ಜಿ.ವೀರಪಾಂಡಯ್ಯ ಅವರಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಕಳೆ ವರ್ಷವೂ ಆಂಧ್ರಪ್ರದೇಶದಲ್ಲಿ ನ್ಯಾಯಾಂಗ ನಿಂದನೆಗೆ ಸಂಬಂಧಿಸಿದಂತೆ 5 ಅಧಿಕಾರಿಗಳಿಕೆ ಶಿಕ್ಷೆ ಪ್ರಕಟಿಸಲಅಗಿತತ್ಉ. ತದನಂತರ ನ್ಯಾಯಾಲಯ ಈ ತೀರ್ಪನ್ನು ಅಮಾನತ್ತು ಮಾಡಿದ್ದನ್ನ ಇಲ್ಲಿ ಸ್ಮರಿಸಬಹುದು.