ಕರ್ನಾಟಕ ರಾಜ್ಯ ಹೈಕೋರ್ಟ್ನ ಮುಖ್ಯ ನ್ಯಾಯಾಧೀಶರನ್ನಾಗಿ ಪಿಬಿ ವರಾಳೆ (Justice PB Varale) ಅವರನ್ನು ನೇಮಕ ಮಾಡಲು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದ ಕೊಲಿಜಿಯಂ ಶಿಫಾರಸ್ಸು ಮಾಡಿದೆ.
ಬಾಂಬೆ ಹೈಕೋರ್ಟ್ನ ನ್ಯಾಯಾಧೀಶರಾಗಿದ್ದ ಇವರು ಇದೀಗ, ರಾಜ್ಯ ಹೈಕೋರ್ಟ್ನ ಮುಖ್ಯ ನ್ಯಾಯಾಧೀಶರಾಗಲಿದ್ದಾರೆ.
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ನೇತೃತ್ವದ ಕೊಲಿಜಿಯಂ ಮಂಡಳಿ ಇದೇ 28 ರಂದು ಸಭೆ ನಡೆಸಿತ್ತು. ಈ ಸಭೆಯಲ್ಲಿ ಪಿಬಿ ವರಾಳೆ ಸೇರಿದಂತೆ ಬಾಂಬೆ ಹೈಕೋರ್ಟ್ನ ಮೂವರು ನ್ಯಾಯಾಧೀಶರನ್ನು ಇತರೆ ರಾಜ್ಯಗಳ ಮುಖ್ಯ ನ್ಯಾಯಮೂರ್ತಿಗಳನ್ನಾಗಿ ಶಿಫಾರಸ್ಸು ಮಾಡಲಾಗಿದೆ.
ಇದನ್ನೂ ಓದಿ : ರಾಜ್ಯ ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಅಲೋಕ್ ಆರಾಧೆ ನೇಮಕ
ನ್ಯಾಯಮೂರ್ತಿ ವರಾಳೆ (Justice PB Varale) ಬಾಂಬೆ ಹೈಕೋರ್ಟ್ನ ಹಿರಿಯ ನ್ಯಾಯಾಧೀಶರಾಗಿದ್ದಾರೆ. ಇವರು ವಕೀಲರಾಗಿ 1985 ರ ಅಗಸ್ಟ್ ನಲ್ಲಿ ನೋಂದಣಿಯಾಗಿದ್ದಾರೆ. ವಕೀಲ ಎಸ್ಎನ್ ಲೋಯಾ ಅವರ ಗರಡಿಯಲ್ಲಿ ಪಳಗಿದ ಇವರು 1992 ರ ವರೆಗೆ ಔರಂಗಾಬಾದ್ನ ಅಂಬೇಡ್ಕರ್ ಲಾ ಕಾಲೇಜಿನಲ್ಲಿ ಪ್ರಾಧ್ಯಾಫಕರಾಗಿ ಸೇವೆ ಸಲ್ಲಿಸಿದ್ದಾರೆ.
ಇವರನ್ನು ಜುಲೈ 18, 2008 ರಲ್ಲಿ ಬಾಂಬೆ ಹೈಕೋರ್ಟ್ನ ನ್ಯಾಯಾಧೀಶರನ್ನಾಗಿ ನೇಮಕ ಮಾಡಲಾಗಿತ್ತು.
ಪ್ರಸ್ತು, ರಾಜ್ಯ ಹೈಕೋರ್ಟ್ನಲ್ಲಿ ನ್ಯಾಯಮೂರ್ತಿ ಅಲೋಕ್ ಅರಾಧೆಯವರು ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಇದನ್ನೂ ಓದಿ : Breaking News : ದೇಶದ 49 ನೇ ಮುಖ್ಯ ನ್ಯಾಯಮೂರ್ತಿಯಾಗಿ ಯುಯು ಲಲಿತ್ ಪ್ರಮಾಣವಚನ