ADVERTISEMENT
ಉಡುಪಿ ಜಿಲ್ಲೆಯ ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾರು..? ಮೂಲಗಳ ಪ್ರಕಾರ ಸಚಿವ ಸುನಿಲ್ ಕುಮಾರ್ ವಿರುದ್ಧ ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ಅವರನ್ನು ಕಣಕ್ಕಿಳಿಸುವ ಬಗ್ಗೆ ಯೋಚನೆ ಮಾಡುತ್ತಿದೆ.
ಮೂಲಗಳ ಪ್ರಕಾರ ಸ್ವತಃ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರೇ ಜಯಪ್ರಕಾಶ್ ಹೆಗ್ಡೆ ಅವರನ್ನು ಮತ್ತೆ ಕಾಂಗ್ರೆಸ್ ಬರುವಂತೆ ಆಹ್ವಾನ ನೀಡಿದ್ದಾರೆ.
ಜಯಪ್ರಕಾಶ್ ಹೆಗ್ಡೆ ಅವರಿಗೆ ಕಾರ್ಕಳದಿಂದ ಕಾಂಗ್ರೆಸ್ನಿಂದ ಟಿಕೆಟ್ ನೀಡುವ ಭರವಸೆಯನ್ನೂ ಕೊಟ್ಟಿದ್ದಾರೆ ಎನ್ನಲಾಗಿದೆ.
ಹೆಗ್ಡೆ ಅವರು ಸದ್ಯ ಕರ್ನಾಟಕ ರಾಜ್ಯ ಹಿಂದುಳಿದ ಆಯೋಗಗಳ ಅಧ್ಯಕ್ಷರು. ಆ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ಕೊಟ್ಟು ಚುನಾವಣೆಗೆ ಸ್ಪರ್ಧೆ ಮಾಡಲು ಉತ್ಸುಕರಾಗಿದ್ದಾರೆ.
ಸದ್ಯಕ್ಕೆ ಕಾರ್ಕಳದಲ್ಲಿ ಕಾಂಗ್ರೆಸ್ಗೆ ಪ್ರಬಲ ಅಭ್ಯರ್ಥಿಗಳಿಲ್ಲ. ಈ ಹಿನ್ನೆಲೆಯಲ್ಲಿ ಕಾರ್ಕಳ ಕಾಂಗ್ರೆಸ್ ನಾಯಕರು ಕೆಲ ತಿಂಗಳಿಂದ ಹೆಗ್ಡೆ ಅವರನ್ನು ಕಾಂಗ್ರೆಸ್ಗೆ ಕರೆತರುವ ಪ್ರಯತ್ನವನ್ನು ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮುಂದೆ ಅಂಥದ್ದೊಂದು ಪ್ರಸ್ತಾಪವನ್ನೂ ಇಟ್ಟಿದ್ದರು.
ಈಗ ಸ್ವತಃ ಕೆಪಿಸಿಸಿ ಅಧ್ಯಕ್ಷರೇ ಹೆಗ್ಡೆ ಅವರ ಜೊತೆಗೆ ಮಾತಾಡಿರುವ ಕಾರಣ ಕಾರ್ಕಳ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ಆಗಿದೆ.
ಹೆಗ್ಡೆ ಅವರು ಬಂಟ ಸಮುದಾಯದವರು. ಜನಪ್ರಿಯ ನಾಯಕ, ಶುದ್ಧ ಹಸ್ತ ಮತ್ತು ಪ್ರಾಮಾಣಿಕ.
2013ರಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ನಡೆದಿದ್ದ ಉಪ ಚುನಾವಣೆಯಲ್ಲಿ ಆಗ ಬಿಜೆಪಿ ಅಭ್ಯರ್ಥಿ ಆಗಿದ್ದ ಸುನಿಲ್ ಕುಮಾರ್ ಅವರನ್ನು ಸೋಲಿಸಿದ್ದರು.
ಈಗ ಮತ್ತೆ ಕಾರ್ಕಳದಲ್ಲಿ ಅದೇ ಸುನಿಲ್ ಕುಮಾರ್ ವಿರುದ್ಧ ಕಾಂಗ್ರೆಸ್ನಿಂದ ಹೆಗ್ಡೆ ಅವರು ನಿಂತರೆ ಕ್ಷೇತ್ರದಲ್ಲಿ ಚುನಾವಣಾ ಲೆಕ್ಕಾಚಾರ ಬದಲಾಗಬಹುದು ಎನ್ನುವುದು ಕ್ಷೇತ್ರದ ಜನರ ಮಾತು.
ADVERTISEMENT