ಕಲ್ಯಾಣ ಕರ್ನಾಟಕದಲ್ಲಿ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಪ್ರತ್ಯೇಕ ಅಧಿಸೂಚನೆ ಹೊರಡಿಸುವಂತೆ ರಾಜ್ಯ ಸರ್ಕಾರ ಹೊಸ ಸುತ್ತೋಲೆ ಹೊರಡಿಸಿದೆ.
ಕಲ್ಯಾಣ ಕರ್ನಾಟಕ ಮತ್ತು ಮಿಕ್ಕುಳಿದ ವೃಂದಗಳ ಹುದ್ದೆಗಳ ನೇಮಕಾತಿಗೆ ಏಕಕಾಲಕ್ಕೆ ಅಧಿಸೂಚನೆ ಹೊರಡಿಸಿ ಒಂದೇ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲು ಜೂನ್ 6, 2020ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಕಲ್ಯಾಣ ಕರ್ನಾಟಕ ಭಾಗದಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಆ ಆದೇಶವನ್ನು ಸರ್ಕಾರ ಹಿಂಪಡೆದಿದೆ.
ಈ ಹಿನ್ನೆಲೆಯಲ್ಲಿ
`ವಿವಿಧ ನೇಮಕಾತಿ ಪ್ರಾಧಿಕಾರಗಳು ಇನ್ಮುಂದೆ ಮಿಕ್ಕುಳಿದ ವೃಂದ ಮತ್ತು ಸ್ಥಳೀಯ ವೃಂದದಲ್ಲಿ ಲಭ್ಯವಿರುವ ನೇರ ನೇಮಕಾತಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸುವ ಅಧಿಸೂಚನೆಯನ್ನು ಪ್ರತ್ಯೇಕವಾಗಿ ಹೊರಡಿಸಿ ಪ್ರತ್ಯೇಕವಾಗಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಿ ಪ್ರತ್ಯೇಕವಾಗಿ ನೇಮಕಾತಿ ಪ್ರಕ್ರಿಯೆ ಕೈಗೊಂಡು ಆಯ್ಕೆಯನ್ನು ಅಂತಿಮಗೊಳಿಸುವಂತೆ ಸೂಚಿಸಿದೆ.
ಎಂದು ಸರ್ಕಾರ ಹೊಸ ಸುತ್ತೋಲೆಯಲ್ಲಿ ತಿಳಿಸಿದೆ.
ಆದರೆ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳಿಗೆ ಒಂದೇ ನೇಮಕಾತಿ ಅಧಿಸೂಚನೆ ಇರಲಿದೆ.