ಹೊರಗುತ್ತಿಗೆ ಆಧಾರದಲ್ಲಿ 400 ಮಂದಿ ಖಾಸಗಿ ಚಾಲಕರನ್ನು (Private Drivers) ನೇಮಿಸಿಕೊಳ್ಳಲು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ನಿರ್ಧರಿಸಿದೆ. ಈ ಸಂಬಂಧ ಟೆಂಡರ್ ಕರೆದು ಟೆಂಡರ್ ಮೂಲಕ ಭರ್ತಿ ಮಾಡಿಕೊಳ್ಳಲಾಗುತ್ತದೆ.
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಸದ್ಯ 1,200 ಚಾಲಕರ ಕೊರತೆ ಇರುವ ಹಿನ್ನೆಲೆಯಲ್ಲಿ ಹೊರಗುತ್ತಿಗೆ (Out Sourcing) ಮೂಲಕ ಭರ್ತಿ ಮಾಡಿಕೊಳ್ಳಲು ನಿರ್ಧರಿಸಲಾಗಿದೆ.
ಬಳ್ಳಾರಿ ಡಿಪೋ – 100, ಹೊಸಪೇಟೆ – 100, ಸಿಂಧನೂರು- 30, ಮಾನ್ವಿ – 20, ಗುರುಮಟ್ಕಲ್ – 30, ಯಾದಗಿರಿ – 20, ಗಂಗಾವತಿ – 30, ಚಿಂಚೋಳಿ – 30, ಸೇಡಂ- 30, ಚಿತ್ತಾಪುರ ಡಿಪೋದಲ್ಲಿ – 10 ಮಂದಿ ಖಾಸಗಿ ಚಾಲಕರನ್ನು ಹೊರಗುತ್ತಿಗೆ ಆಧಾರದಲ್ಲಿ ನೇಮಿಸಿಕೊಳ್ಳಲು ಸೆಪ್ಟೆಂಬರ್ 12 ಮತ್ತು 13ರಂದು ನಡೆದ ನಿಗಮದ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮತ್ತು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದಂತೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲೂ ಗುತ್ತಿಗೆ ಆಧಾರದಲ್ಲಿ ತಾತ್ಕಾಲಿಕವಾಗಿ ಚಾಲಕರ ಭರ್ತಿಗೆ ತೀರ್ಮಾನಿಸಲಾಗಿದೆ.
ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಇವತ್ತು ಮತದಾನ ಆರಂಭವಾಗಿದೆ. ಉಪ ಚುನಾವಣೆ ಹಿನ್ನೆಲೆಯಲ್ಲಿ ಬೆಳಗ್ಗೆ 7 ಗಂಟೆಯಿAದಲೇ ಮತದಾನ ಆರಂಭವಾಗಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿರುವ...
ನವೆಂಬರ್ 6ರಂದು ಅಂದರೆ ನಾಳೆ ಬುಧವಾರ ವಿಚಾರಣೆಗೆ ಹಾಜರಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮೈಸೂರು ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ...
ಮುಡಾ ಹಗರಣದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆ ಆದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ನವೆಂಬರ್ 26ಕ್ಕೆ ಮುಂದೂಡಿದೆ. ಜೊತೆಗೆ ಮುಡಾ ಹಗರಣ...
ಚಿಕ್ಕಮಗಳೂರು ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಇದೇ ನವೆಂಬರ್ 9ರ ಬೆಳಗ್ಗೆ 6 ಗಂಟೆಯಿAದ ನವೆಂಬರ್ 11ರ ಬೆಳಗ್ಗೆ 6 ಗಂಟೆಯವರೆಗೆ ಪ್ರವಾಸಿಗರಿಗೆ...