ಸರ್ಕಾರಿ ಕಾರ್ಯಕ್ರಮಗಳಲ್ಲಿ ಕನ್ನಡ (Kannada) ಕಡ್ಡಾಯಗೊಳಿಸಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ (Chief Secretary) ನಂದಿತಾ ಶರ್ಮಾ (Nanditha Sharma) ಅವರು ಆದೇಶ ಹೊರಡಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಅವರ ಅನುಮೋದನೆಯೊಂದಿಗೆ ಈ ಆದೇಶ ಜಾರಿ ಆಗಿದೆ.
ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಕಾರ್ಯಕ್ರಮಗಳಲ್ಲಿ ಕನ್ನಡ ಬಳಕೆ ಕಡ್ಡಾಯ ಎಂದು ಆದೇಶದಲ್ಲಿ ಹೇಳಲಾಗಿದೆ.
ಕನ್ನಡ ಆದ್ಯತೆ ಆಗಬೇಕೇ ಹೊರತು ಆಯ್ಕೆ ಆಗಬಾರದು ಎಂದು ಹೇಳಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಕನ್ನಡವನ್ನು ಕಡ್ಡಾಯವಾಗಿ ಬಳಸುವಂತೆ ಎಲ್ಲ ಇಲಾಖೆಗಳ ಮುಖ್ಯಸ್ಥರಿಗೆ ಸೂಚಿಸಲಾಗಿದೆ.
ಕರ್ನಾಟಕದಲ್ಲಿ ನಡೆಯುವ ಕೇಂದ್ರ ಸರ್ಕಾರದ ಕಾರ್ಯಕ್ರಮಗಳಲ್ಲಿ ಬಿಜೆಪಿ (BJP) ಸರ್ಕಾರ ಉದ್ದೇಶಪೂರ್ವಕವಾಗಿ ಕನ್ನಡವನ್ನು ಕಡೆಗಣಿಸಿ ಹಿಂದಿ ಹೇರಿಕೆ ಮಾಡುತ್ತಿತ್ತು. ಈ ಹಿನ್ನೆಲೆಯಲ್ಲಿ ಆಕ್ರೋಶ ಕೇಳಿಬಂದ ಹಿನ್ನೆಲೆಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಪ್ರಸ್ತಾಪದಂತೆ ಕನ್ನಡ ಬಳಕೆಯನ್ನು ಕಡ್ಡಾಯಗೊಳಿಸಲಾಗಿದೆ.
ADVERTISEMENT
ADVERTISEMENT