ಶ್ರೀಶೈಲ ಮಲ್ಲಿಕಾರ್ಜುನ ದೇವಾಲಯದ ಬಳಿ ನಡೆಬಾರದ್ದು ನಡೆದಿದೆ. ರಾಜ್ಯದ ಭಕ್ತರ ಮೇಲೆ ಸ್ಥಳೀಯರು ದಾಳಿ ನಡೆಸಿದ್ದು, ತಡರಾತ್ರಿ ಭಾರೀ ಘರ್ಷಣೆಯೇ ನಡೆದಿದೆ.
ಟೀ ಅಂಗಡಿ ವ್ಯಾಪಾರಿ ಮತ್ತು ಕನ್ನಡಿಗ ಭಕ್ತರ ನಡುವೆ ಮಾತಿಗೆ ಮಾತು ಬೆಳೆದು ಅದು ವಿಕೋಪಕ್ಕೆ ಹೋಗಿದೆ. ಸ್ಥಳೀಯ ವ್ಯಾಪಾರಿಗಳು ಕನ್ನಡಿಗರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ದಾಳಿಯಲ್ಲಿ ಓರ್ವ ಭಕ್ತ ತೀವ್ರವಾಗಿ ಗಾಯಗೊಂಡಿದ್ದಾರೆ.
ಇದೇ ಸಿಟ್ಟಿನ ಭರದಲ್ಲಿ ಕನ್ನಡಿಗರು ಟೀ ಅಂಗಡಿಗೆ ಬೆಂಕಿ ಹಚ್ಚಿದ್ದಾರೆ ಎಂದು ತಿಳಿದುಬಂದಿದೆ.
ಆಂಧ್ರಪ್ರದೇಶದಲ್ಲಿರುವ ಶ್ರೀಶೈಲ ಮಲ್ಲಿಕಾರ್ಜುನ ಸ್ವಾಮಿ ದೇವಾಲಯಕ್ಕೆ ಕನ್ನಡಿಗ ಭಕ್ತರು ಅಪಾರ ಸಂಖ್ಯೆಯಲ್ಲಿ ತೆರಳುತ್ತಾರೆ. ಹೈದ್ರಾಬಾದ್ ಕರ್ನಾಟಕ ಜಿಲ್ಲೆಗಳಿಂದ ಭಕ್ತರು ಕಾಲ್ನಡಿಗೆ ಮೂಲಕ ಶ್ರೀಶೈಲಕ್ಕೆ ಹೋಗುತ್ತಾರೆ.